May 9, 2024

MALNAD TV

HEART OF COFFEE CITY

ಮರ್ಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಧಾ ಮಂಜುನಾಥ್ ಅವಿರೋಧವಾಗಿ ಆಯ್ಕೆ

1 min read

ಚಿಕ್ಕಮಗಳೂರು-ತಾಲ್ಲೂಕಿನ ಮರ್ಲೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸುಧಾಮಂಜುನಾಥ್, ಉಪಾಧ್ಯಕ್ಷರಾಗಿ ಲೀಲಾವತಿನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಸಫೀರ್ ಅಹಮದ್ ಘೋಷಿಸಿದರು.ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ ಮಾತನಾಡಿ ಮರ್ಲೆ ಗ್ರಾಮ ಪಂಚಾಯಿತಿಗೆ ಸುಧಾಮಂಜುನಾಥ್ ಅಧ್ಯಕ್ಷರಾಗಿ, ಲೀಲಾವತಿನಾಗರಾಜ್ ರವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಗಟ್ಟಿಯಾಗಿ ನಿಂತು ಕಾರ್ಯನಿರ್ವಹಿಸುವ ಮೂಲಕ ಮರ್ಲೆ ಸೇರಿದಂತೆ ಹರಿಹರದಹಳ್ಳಿ, ಮುಗುಳುವಳ್ಳಿ ಗ್ರಾಪಂನಲ್ಲಿಯೂ ಬಿಜೆಪಿ ಬೆಂಬಲಿಗ ಅಭ್ಯರ್ಥಿಗಳು ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಗೊಳ್ಳುವಲ್ಲಿ ಶ್ರಮವಹಿಸಿದ್ದಾರೆ, ನೂತನ ಅಧ್ಯಕ್ಷಉಪಾಧ್ಯಕ್ಷರು ಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಮರ್ಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಪಡಿಸುವ ಮೂಲಕ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಬೇಕೆಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕನಕರಾಜ್ ಅರಸ್ ಮಾತನಾಡಿ ಅವಿರೋಧವಾಗಿ ಆಯ್ಕೆಯಾಗಲು ಸಹಕಾರ ನೀಡಿದ ಸರ್ವ ಸದಸ್ಯರಿಗೂ ಧನ್ಯವಾದಗಳನ್ನು ತಿಳಿಸಿದರು, ಅವಕಾಶ ಎನ್ನುವುದು ಕಡಿಮೆಯಾದಾಗ ಸಿಕ್ಕಿರುವ ಅವಕಾಶಗಳನ್ನು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರ ಸಹಕಾರದಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿಯತ್ತ ಗಮನ ಹರಿಸಬೇಕು, ಕಳೆದÀ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾದರು ಸಹ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಿಸಿರುವುದು ಕಾರ್ಯಕರ್ತರು ಒಡನಾಟ ಮತ್ತು ಶಕ್ತಿಕುಂದದೆ ಇರುವುದಕ್ಕೆ ಇದೇ ಸಾಕ್ಷಿಯಾಗಿದೆ, ಮುಂದಿನ ಲೋಕಸಭೆ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಹೋರಾಟದ ಮೂಲಕ ಅಭ್ಯರ್ಥಿಯ ಪರ ಗೆಲುವಿಗೆ ಸಹಕಾರ ನೀಡಲಾಗುವುದು ಎಂದರು.

ಮರ್ಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾಮಂಜುನಾಥ್ ಮಾತನಾಡಿ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದವನ್ನು ತಿಳಿಸಿದ ಅವರು ಸದಸ್ಯರ ವಿಶ್ವಾಸವನ್ನು ಪಡೆದು ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ನೂತನ ಉಪಾಧ್ಯಕ್ಷೆ ಲೀಲಾವತಿನಾಗರಾಜ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೂ ಧನ್ಯವಾದಗಳನ್ನು ತಿಳಿಸಿದ ಅವರು ಮುಂದಿನ ದಿನಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರುಗಳೆಲ್ಲರು ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೋಟೆ ರಂಗನಾಥ್, ಕೆ.ಪಿ.ವೆಂಕಟೇಶ್, ಮೂಗಳವಳ್ಳಿ ದಿನೇಶ್, ದುರ್ಗೇಶ್, ಮಣ್ಣೇನಹಳ್ಳಿ ರಾಜು, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುರೇಶ್, ರಮೇಶ್, ಶ್ರೀಧರ್, ವೆಂಕಟಮ್ಮ, ಚಂದ್ರಪ್ಪ, ಭಾಗ್ಯ, ಹೂವಮ್ಮ, ರೂಪ, ಬಸವರಾಜ್, ಜಯಂತಿ, ರಾಜು, ಜಗಧೀಶ್, ಗೌರಮ್ಮ, ಪಿಡಿಓ ಯಮುನಾ, ಕಾರ್ಯದರ್ಶಿ ನಿರಂಜನಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!