May 19, 2024

MALNAD TV

HEART OF COFFEE CITY

ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪತ್ನಿ‌ ರಾಜೇಶ್ವರಿ ತೇಜಸ್ವಿ ನಿಧನ

1 min read

ಚಿಕ್ಕಮಗಳೂರು: ಕವಿ ಕಾಡಿನ ಸಂತ ತೇಜಸ್ವಿ ಅವರ ಪತ್ನಿ‌ ರಾಜೇಶ್ವರಿ ತೇಜಸ್ವಿ‌ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿ‌ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಪ್ರೀತಿಸಿದರು. ಆನಂತರ ಇವರ ಬದುಕಿನ ದಿಕ್ಕು ಬದಲಾಯಿಸಿತು. 1966ರಲ್ಲಿ  ವಿವಾಹವಾದರು. ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕ. ಈಗ ಅದು ಐದನೇ ಮುದ್ರಣ ಕಂಡಿದೆ.

ಇವರ ಹವ್ಯಾಸವೂ ವಿಭಿನ್ನವಾಗಿದೆ. ಕ್ರೋಶ-ಟೈಲರಿಂಗ್, ಮೊಮ್ಮಕ್ಕಳು ಮತ್ತು ನೆರೆಹೊರೆಯ ಮಕ್ಕಳಿಗೆ Stamp collection. ಇವತ್ತಿಗೆ E-mail ಇದ್ದರೂ ಅಪರೂಪದ Stamp collection ಮಾಡಿದ್ದಾರೆ. ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕ. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ರಾಜೇಶ್ವರಿ ತೇಜಸ್ವಿಯವರು ಅಪರೂಪದ ಹವ್ಯಾಸಗಳೊಂದಿಗೆ ಮೂಡಿಗೆರೆಯಲ್ಲಿ ಕಾಫಿತೋಟವನ್ನ ನೋಡಿಕೊಳುತ್ತಾ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!