April 28, 2024

MALNAD TV

HEART OF COFFEE CITY

ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳ ಆಗಮನ

1 min read

ಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳ ಆಗಮನವಾಗಿದ್ದು ಇಂದು ಅವರು ತಮ್ಮ ಹುದ್ದೆಯನ್ನು ಅಲಂಕರಿಸಿದರು. ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದ ಬಗಾದಿ ಗೌತಮ್ರವರನ್ನು ಇತ್ತಿಚೆಗೆ ರಾಜ್ಯ ಸರ್ಕಾರ ವಾಣಿಜ್ಯ ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿತ್ತು. ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಕೆ.ಎನ್ ರಮೇಶ್ ರವರು ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಬೆಂಗಳೂರಿನಲ್ಲಿ ಪ್ರವಾಸ್ಯೋಧ್ಯಮ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು, ಜಿಲ್ಲೆಗೆ ಜಿಲ್ಲಾಧಿಕಾರಿಗಳಾಗಿ ಬಂದ ಕೆ.ಎನ್ ರಮೇಶ್ರವರಿಗೆ ಪ್ರಭಾರಿ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪೂವಿತರವರಿಂದ ಅಧಿಕಾರ ಹಸ್ತಾಂತರಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!