May 19, 2024

MALNAD TV

HEART OF COFFEE CITY

ಕೇಂದ್ರ ಸಚಿವೆ ಶೋಭಾ ಕಾರಿಗೆ ಅಡ್ಡಗಟ್ಟಿ ಕಪ್ಪುಪಟ್ಟಿ ಪ್ರದರ್ಶನ

1 min read

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಸಂಸದೆ ಶೋಭಾ ಇಂದು ತರೀಕೆರೆ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಭೇಟಿ ನೀಡಿದ್ದರು. ತರೀಕೆರೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಘಟಕದ ಉದ್ಘಾಟನೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ, ನೂರಕ್ಕೂ ಹೆಚ್ಚು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಕಾರಿಗೆ ಅಡ್ಡಗಟ್ಟಲು ಯತ್ನಿಸಿ ಕಪ್ಪು ಪಟ್ಟಿ ಪ್ರದರ್ಶಿಸಿದರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ, ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ತರೀಕೆರ ಪಟ್ಟಣದ ಗಾಂಧಿ ಸರ್ಕಲ್ ಬಳಿ ಸಂಸದೆ ಶೋಭಾ ತೆರಳುತ್ತಿದ್ದ ಕಾರನ್ನ ಅಡ್ಡಗಟ್ಟಲು ಯತ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸಚಿವರ ಕಾರಿಗೆ ಅಡ್ಡಗಟ್ಟಲು ಯತ್ನಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸರು ಬಳಿಕ ಬಿಡುಗಡೆಗೊಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!