May 4, 2024

MALNAD TV

HEART OF COFFEE CITY

ರಕ್ತಸಿಕ್ತ ಕೈಗಳನ್ನು ದೀದಿ ಯಾವ ಪುಣ್ಯದ ಕಾರ್ಯದಿಂದಲೂ ತೊಳೆದುಕೊಳ್ಳಲು ಸಾಧ್ಯವಿಲ್ಲ : ಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

1 min read

ಚಿಕ್ಕಮಗಳೂರು : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಬಿ.ಜೆ.ಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿ.ಜೆ.ಪಿ. ಪಕ್ಷವು ಕರೆ ನೀಡಿದ್ದಾ ರಾಷ್ಟ್ರಧ್ಯಂತ ಪ್ರತಿಭಟನೆಗೆ ಚಿಕ್ಕಮಗಳೂರಿನಲ್ಲೂ ಬಿ.ಜೆ.ಪಿ ಕಾರ್ಯಕರ್ತರು ಗಾಂಧಿ ಮೈದಾನದಲ್ಲಿ  ಮೌನ ಪ್ರತಿಭಟನೆ ಮಾಡಿದ್ರು. ಮಮತಾ ದೀದಿ, ರಕ್ತಸಿಕ್ತ ಕೈಗಳನ್ನು ಯಾವ ಪುಣ್ಯ ಕಾರ್ಯದಿಂದಲೂ ತೊಳೆದುಕೊಳ್ಳಲು ಆಗುವುದಿಲ್ಲ, ನಿಮ್ಮ ಕೈಗಳು ರಕ್ತಸಿಕ್ತವಾಗಿದ್ದು, ಇಂಥ ರಕ್ತಸಿಕ್ತ ಕೈಗಳಿಂದ ಅಧಿಕಾರ ನಡೆಸಿದರು ಪಾಪವೇ ಹೆಚ್ಚಾಗುತ್ತೋ ವಿನಃ, ಪುಣ್ಯ ಬರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಮತಾ ದೀದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 ಚುನಾವಣೆ ಪೂರ್ವದಲ್ಲೂ ದೌರ್ಜನ್ಯದ ಮೂಲಕ ಚುನಾವಣೆ ನಡೆಸಲು ಮುಂದಾದ್ರು ಅದಕ್ಕೆ ಅವಕಾಶ ಸಿಗಲಿಲ್ಲ. ಈಗ ದೌರ್ಜನ್ಯದ ಮೂಲಕ ಬಿಜೆಪಿ ಬೆಳವಣಿಗೆಯನ್ನ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದೀರಾ ಇದನ್ನ ನಾವು ಖಂಡಿಸುತ್ತೇವೆ ಎಂದರುಪಶ್ಚಿಮ ಬಂಗಾಳದಲ್ಲಿ ಕಳೆದ 72 ಗಂಟೆಗಳಲ್ಲಿ ಬಿಜೆಪಿ ಕಚೇರಿಯನ್ನ ಸುಟ್ಟು, ಮನೆಗಳಿಗೆ ಬೆಂಕಿ ಹಾಕಿ, ಕಾರ್ಯಕರ್ತರ ಅಂಗಡಿ ಲೂಟಿ ಮಾಡಿ 12ಕ್ಕೂ ಹೆಚ್ಚು ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ. 281 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದಂತಹಾ ಪಶ್ಚಿಮ ಬಂಗಾಳ ಸರಕಾರವೇ ಗೂಂಡಾಗಳಿಗೆ ಬೆಂಬಲವಾಗಿ ನಿಂತಿದೆ. ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ವರ್ತನೆ ಮಾಡುತ್ತಿದ್ದಾರೆ. ಇದನ್ನ ಖಂಡಿಸಿ ಬಿಜೆಪಿ ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆಯನ್ನು ಇಂದು ಮಾಡಲಾಯಿತು.. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ ನೈತಿಕ ಧೈರ್ಯ ತುಂಬುವ ಕೆಲಸ ಮಾಡುತ್ತಾರೆ. ನಾವು ಪ್ರಜಾಪ್ರಭುತ್ವದ ತೀರ್ಪನ್ನು ಗೌರವಿಸಿ, ಅಭಿವೃದ್ಧಿಗೆ ಸಹಕಾರ ಕೊಡುತ್ತೇವೆ ಎಂದಿದ್ದೇವೆ. ಬಿಜೆಪಿ ಯಾವತ್ತೂ ಪ್ರಜಾಪ್ರಭುತ್ವದ ಆಶಯಕ್ಕೆ ವಿರೋಧವಾಗಿ ವರ್ತಿಸಿಲ್ಲ. ಆದರೆ, ಹತ್ಯೆಯ ಮೂಲಕ ಒಂದು ರಾಜಕೀಯ ಪಕ್ಷದ ಧ್ವನಿಯನ್ನ ಹತ್ತಿಕ್ಕಬಹುದು ಎಂಬ ದುಷ್ಟ ಆಲೋಚನೆ ಸರಿಯಲ್ಲ. ಶ್ಯಾಂಪ್ರಸಾದ್ ಮುಖರ್ಜಿ, ದೀನದಯಾಳ್ ಅವರನ್ನ ಹತ್ಯೆ ಮಾಡಿದರು. ಬಿಜೆಪಿ ಬೆಳವಣಿಗೆ ತಡೆಯಲು ಆಗಲಿಲ್ಲ, ಹತ್ಯೆ ಮೂಲಕ ಪಕ್ಷದ ಬೆಳವಣಿಗೆ ತಡೆಯಲು ಸಾಧ್ಯವಿಲ್ಲ. ಪಕ್ಷ ಮತ್ತೆ ಹತ್ತು ಪಟ್ಟು ಸಾಮರ್ಥ್ಯದಿಂದ ಮೇಲೆದ್ದು ನಿಲ್ಲುತ್ತೆ, ಹತ್ಯಾ ರಾಜಕಾರಣ ಕೊನೆಯಾಗಬೇಕು ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!