May 10, 2024

MALNAD TV

HEART OF COFFEE CITY

ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ತಪ್ಪುವುದಿಲ್ಲ – ಮೋಟಮ್ಮ

1 min read

ಕಾಂಗ್ರೆಸ್ ಪಕ್ಷ ಯಾವಾಗಲೂ ಮಾತಿಗೆ ತಪ್ಪಿಲ್ಲ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಆರೋಪಿಸಿದ್ದಾರೆ.ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾಗಾಂಧಿ ಕಾಲದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಂಡು ಬರುತ್ತಿದೆ ಬಡವರ ಪರವಾರ 20 ಅಂಶದ ಕಾರ್ಯಕ್ರಮಗಳು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಕೊಟ್ಟ 33% ಮಹಿಳಾ ಮೀಸಲಾತಿ ಸೇರಿದಂತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾ ಬಂದಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 15 ದಿನಗಳಾಗಿವೆ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಪಕ್ಷ ಬದ್ದವಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಮಾರ್ಗಸೂಚಿಗಳನ್ನು ರೂಪಿಸಬೇಕಾಗಿದೆ ಯಾರಿಗೆ ಈ ಯೋಜನೆಗಳು ಅನ್ವಯವಾಗುತ್ತವೆ ಎಂದು ಮಾನದಂಡಗಳ ಬಗ್ಗೆ ಪರಿಶೀಲಿಸಬೇಕು ಈ ಪ್ರಕ್ರಿಯೆಗಳು ಆರಂಭವಾಗಿದ್ದು, ಜನರಿಗೆ ಯೋಜನೆ ತಲುಪಬೇಕಾದರೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ರಾಜ್ಯದ ಜನರು ತಾಳ್ಮೆಯಿಂದ ಇದ್ದಾರೆ ಆದರೆ ಬಿಜೆಪಿಯವರು ಜನರನ್ನು ಪ್ರಚೋಧಿಸುವ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದೆ ಸರ್ಕಾರ ರಚಿಸಿ ಆಡಳಿತ ನಡೆಸಿರುವಂತ ಹಿರಿಯ ರಾಜಕಾರಣಿಯಾಗಿರುವ ಸಿ.ಟಿ ರವಿ ಅಂತಹವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ದಿಕ್ಕು ತಪ್ಪಿಸುವಂತೆ ಹೇಳಿಕೆ ನೀಡುತ್ತಿರುವುದು ಸಮಂಜಸವಲ್ಲ ಎಂದು ಹೇಳಿದರು.ದೇಶದ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ನಡೆಸಿ ಅನಿವಾಸಿ ಭಾರತೀಯರೊಂದಿಗೆ ದೇಶದ ಬಗ್ಗೆ ಹೆಮ್ಮೆಯ ಮಾತನಾಡಿದ್ದಾರೆ ಆದರೆ ದೇಶದ ಉತ್ತರ ಪ್ರದೇಶ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ ಬೇಟಿ ಬಚಾವ್ ಬೇಟಿ ಪಡಾವ್ ಎಂಬ ಮೋದಿ ಮಾತು ಇದೇನಾ ಎಂದು ಪ್ರಶ್ನಿಸಿದರು.
ಅಂತರಾಷ್ಟ್ರೀಯ ಕುಸ್ತಿಪಟುಗಳು ತಮಗಾಗಿರುವ ಲೈಂಗಿಕ ಕಿರುಕುಳದ ಬಗ್ಗೆ ಪ್ರತಿಭಟನೆ ನಡೆಸುತ್ತಾ ತಾವು ಪಡೆದ ಪದಕಗಳನ್ನು ನೀರಿಗೆ ಎಸೆಯುಲು ಮುಂದಾಗಿದ್ದಾರೆ ಈ ಬಗ್ಗೆ ಯಾರು ಚಕಾರವೆತ್ತುತ್ತಿಲ್ಲ ಇದು ಖಂಡನೀಯ ಎಂದರು.ಜಿಲ್ಲಾ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಶಭಾನ ಸುಲ್ತಾನ್ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!