May 19, 2024

MALNAD TV

HEART OF COFFEE CITY

ಮರು ಮತದಾನಕ್ಕೆ ಆಗ್ರಹ, ಇಡೀ ದಿನ ಪ್ರತಿಭಟನೆ ಹೈಡ್ರಾಮಾ

1 min read

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ೬ ಮತಗಳು ಅಂತರದಲ್ಲಿ ಪರಭಾವಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮರು ಮತ ಏಣಿಕೆ ಮಾಡಬೇಕು ಎಂದು ಆಗ್ರಹಿಸಿ ಮತಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು.

೧೨ ಗಂಟೆ ಹೊತ್ತಿಗೆ ಫಲಿತಾಂಶ ಹೊರಬಿಳುತ್ತಿದ್ದಂತೆ ಮತ ಏಣಿಕೆ ಕೇಂದ್ರದ ಎದುರು ಜಮಾವಣೆಗೊಂಡ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮತ ಏಣಿಕೆ ಕೇಂದ್ರಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆದರು.

* ಡಿ.ಸಿ ಕಾರಿಗೆ ಮುತ್ತಿಗೆ

ಮರು ಏಣಿಕೆ ನಡೆಸಲು ಪ್ರತಿಭಟನಾಕಾರರು ಒತ್ತಾಯ ಮಾಡುವ ವೇಳೆಯಲ್ಲಿಯೇ ಮತ ಏಣಿಕೆ ಕೇಂದ್ರದಿoದ ಹೊರಟ ಜಿಲ್ಲಾಧಿಕಾರಿಗಳ ಕಾರನ್ನು ಸುತ್ತುವರೆದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾರನ್ನು ಸುತ್ತುವರೆದ ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪಲೀಸರು ಹರಸಾಹಸ ಪಡುವಂತಾಯಿತು. ಸ್ವತ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಎಚ್ ಅಕ್ಷಯ್ ನೇತೃತ್ವದಲ್ಲಿ ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಿ ಕಾರು ತೆರಳಲು ಅವಕಾಶ ಮಾಡಿಕೊಡಲಾಯಿತು.

* ಬಿಜೆಪಿ ಅಭ್ಯರ್ಥಿ ಎದುರು ಆಕ್ರೋಶ

ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಪ್ರಮಾಣ ಪತ್ರ ಪಡೆಯಲು ಮತ ಏಣಿಕೆ ಕೇಂದ್ರಕ್ಕೆ ಆಗಮಿಸಿದ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಎಂ.ಕೆ ಪ್ರಾಣೇಶ್‌ಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ನೂರಾಋಉ ಪೊಲೀಸರ ನಡುವೆಯೇ ಆಕ್ರೋಶ ವ್ಯಕ್ತಪಡಿಸುತ್ತಾ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಮೇಲೆರಗಲು ಯತ್ನಿಸಿದ್ರು ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ತ್ರಾಸದಾಯಕವಾಗಿಯೇ ಪ್ರತಿಭಟನಾಕಾರರನ್ನು ಹಿಂದೆಕ್ಕೆ ತಳ್ಳಿ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರನ್ನು ಮತ ಏಣಿಕೆ ಕೇಂದ್ರಕ್ಕೆ ಕಳುಹಿಸಿದರು.

 

 

 

ಬಿಜೆಪಿ ಅಭ್ಯರ್ಥಿ ಪ್ರಾಣೇಶ್‌ಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ ವಿಷಯ ತಿಳಿದ ಬಿಜೆಪಿ ಕಾರ್ಯಕರ್ತರು ತಮ್ಮ ಕಚೇರಿಯಿಂದ ಮತ ಏಣಿಕೆ ಕೇಂದ್ರದ ಕಡೆಗೆ ತಂಡೋಪ ತಂಡವಾಗಿ ಬಂದು ಕಾಂಗ್ರೆಸ್‌ಗೆ ಧಿಕ್ಕಾರ ಕೂಗತೊಡಗಿದ್ರು. ಇದ್ರಿಂದ ಮತ್ತೆ ಆಕ್ರೋಶ ಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಹ ಆಕ್ರೋಶಗೊಂಡು ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಮತ್ತೆ ಮಧ್ಯೆ ಪ್ರವೇಶಿಸಿದ ಪೊಲೀಸರು ಹರಸಾಹಸ ಪಟ್ಟು ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಬ್ಯಾರಿಕೇಡ್ ಹಾಕಿ ಅಂತರ ಇರುವಂತೆ ನೋಡಿಕೊಂಡರು. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

 

ಕಾಫಿನಾಡಿನ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಯ ಘಳಿಗೆಯ ವರೆಗೂ ಗೆಲುವು ಯಾರಿಗೆ ಎಂಬುದು ನಿರ್ಧಾರವಾಗದ ಕಾರಣ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿತ್ತು. ಈ ನಡುವೆ ಕೊನೆಗೆ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಕೇವಲ ೬ ಮತಗಳಿಂದ ತ್ರಾಸದಾಯಕವಾಗಿ ಗೆದ್ದ ಬಳಿಕ ಬಿಜೆಪಿ ಪಾಳಯದಲ್ಲಿ ಖುಷಿ ಮನೆಮಾಡಿದ್ರೆ, ಕೂಡಲೇ ಮರು ಏಣಿಕೆಗೆ ಕಾಂಗ್ರೆಸ್ ಪಟ್ಟು ಹಿಡಿದು ಪ್ರತಿಭಟನೆ ನಡೆಸಿತ್ತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಹೆಚ್ ಅಕ್ಷಯ್ ಪ್ರತಿಭಟನಾಕರರನ್ನು ಎಷ್ಟು ಮನವೊಲಿಸದ್ರ ಪ್ರಯೋಜನಾವಿಲ್ಲ. ಬಳಿಕ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮನವೊಲಿಸಲು ಯತ್ನಿಸಿದ ಪ್ರಯತ್ನಗಳು ಸಹ ವಿಫಲವಾದವು. ಕೊನೆಗೆ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ತಮ್ಮ ಕಾರ್ಯಕರ್ತರನ್ನು ದು:ಖ ಭರಿತರಾಗಿಯೇ ಸಮಾಧಾನ ಪಡಿಸಿದರು. ಈ ವೇಳೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಕಣ್ಣೀರಾಕಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!