April 27, 2024

MALNAD TV

HEART OF COFFEE CITY

ಮಲೆನಾಡಿಗೆ ಮತ್ತೆ ವಕ್ಕರಿಸಿದ ಮಂಗನ ಖಾಯಿಲೆ

1 min read

ಚಿಕ್ಕಮಗಳೂರು : ಮಲೆನಾಡಲ್ಲಿ ಈ ವರ್ಷದ ಮೊದಲ‌ ಕೆ.ಎಫ್.ಡಿ (ಮಂಗನಖಾಯಿಲೆ) ಪತ್ತೆ ಆಗಿದ್ದು, ಮಲೆನಾಡಿಗರಲ್ಲಿ ಆತಂಕದ ಛಾಯೆ ಮನೆ ಮಾಡಿದೆ.

 

ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆ.ಎಫ್.ಡಿ.ಪತ್ತೆಯಾಗಿದೆ.  ಕೊಪ್ಪದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯು ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಟಿಕ್ಸ್ ಕಳುಹಿಸಿದ್ದ ಅರೋಗ್ಯ ಇಲಾಖೆಗೆ ಮಂಗನ ಖಾಯಿಲೆಯ ರೋಗದ ಲಕ್ಷಣಗಳು ಪತ್ತೆಯಾಗಿದೆ. ಈ ವರ್ಷದ ಮೊದಲ ಕೆ.ಎಫ್.ಡಿ ಪ್ರಕರಣ ಇದಾಗಿದ್ದು, ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಶುರುವಾಗಿದೆ. ಮಂಗನ ಖಾಯಿಲೆಯ ರೋಗ ಲಕ್ಷಣಗಳು ಪತ್ತೆಯಾದ ವ್ಯಕ್ತಿ ಇದ್ದ ಸ್ಥಳ ಹಾಗೂ ಸುತ್ತಮುತ್ತ ಪ್ರತಿ ವ್ಯಕ್ತಿಗಳ ಬಗ್ಗೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಇದರಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಕೆ.ಎಫ್.ಡಿ. ಭೀತಿ ಶುರುವಾಗಿದ್ದು, ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಆಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!