May 17, 2024

MALNAD TV

HEART OF COFFEE CITY

ಬುಧವಾರ ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ.- ಕೆ.ಎನ್.ರಮೇಶ್

1 min read

 ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಿಗೆ ಬುಧವಾರ ಚುನಾವಣೆಗೆ 1224 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈ ಸಂಬಂಧ ಮಂಗಳವಾರ ಜಿಲ್ಲಾ ಕೇಂದ್ರದಿಂದ 5756 ಸಿಬ್ಬಂದಿಗಳು ವಿದ್ಯುನ್ಮಾನ ಮತ ಯಂತ್ರ ಮತ್ತು ಇತರೆ ಸಲಕರಣೆಗಳೊಂದಿಗೆ ತಮ್ಮ ಮತಗಟ್ಟೆಗಳಿಗೆ ತೆರಳಿದರು.ನಗರದ ಐಡಿಎಸ್‍ಜಿ ಕಾಲೇಜು ಆವರಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಅವರ ಸಮ್ಮುಖದಲ್ಲಿ ಸಿಬ್ಬಂದಿಗಳಿಗೆ ಮತಯಂತ್ರಳನ್ನು ವಿತರಣೆ ಮಾಡಲಾಯಿತು. ನಂತರ ಸೂಕ್ತ ಭದ್ರತೆಯೊಂದಿಗೆ ಅವುಗಳನ್ನು ಸಿಬ್ಬಂದಿಗಳು ತಮ್ಮ ಮತಗಟ್ಟೆಗೆ ಕೊಂಡೊಯ್ದರು.ಈ ವೇಳೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಮತಗಟ್ಟೆಗಳಲ್ಲಿ ಪೊಲೀಸರೂ ಸೇರಿದಂತೆ ಮತಗಟ್ಟೆ ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕುಡಿಯುವ ನೀರು, ಶೌಚಾಲಯ, ಊಟ, ಉಪಹಾರಗಳನ್ನು ಜಿ.ಪಂ. ಸಿಇಓ ಅವರ ನೇತೃತ್ವದಲ್ಲಿ ಆಯಾ ತಾ.ಪಂ. ಇಓಗಳ ನಿರ್ದೇಶನ ಪ್ರಕಾರ ಮಾಡಲಾಗಿದೆ ಎಂದರು.
ವಿಶೇಷವಾಗಿ ನಾವು ಮೂರೂ ಮಂದಿ ಅಧಿಕಾರಿಗಳು ಸೇರಿ ಹಿಂದೆ ಯಾವ ಚುನಾವಣೆಯಲ್ಲೂ ಆಗದ ರೀತಿ ಸಿಬ್ಬಂದಿಗಳು ಮತಗಟ್ಟೆಗೆ ತೆರಳಿದ ಕೂಡಲೇ ಒಬ್ಬರು ಅವರನ್ನು ಸ್ವಾಗತಿಸುತ್ತಾರೆ. ಅವರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಅವರು ಮಾಡಲಿದ್ದಾರೆ. ಅವರೆಲ್ಲರೂ ಸ್ಥಳೀಯ ಗ್ರಾ.ಪಂ.ಮಟ್ಟದ ಅಧಿಕಾರಿಗಳಾಗಿರುತ್ತಾರೆ ಎಂದರು.

 

ಕಾನೂನು ಪಾಲನೆ ವಿಚಾರವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 17 ಪ್ಯಾರಾ ಮಿಲಿಟರಿ ತುಕಡಿಗಳು ಆಗಮಿಸಿವೆ. 700 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದ್ದು, ಶಾಂತಿ, ಸುವ್ಯವಸ್ಥೆಯಿಂದ ಮತದಾನ ನಡೆಯಲಿದೆ. ಎಲ್ಲಾ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.ಬುಧವಾರ ನಡೆಯುವ ಚುನಾವಣೆ ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಉಮಾಪ್ರಶಾಂತ್ ತಿಳಿಸಿದರು.
ನಕ್ಸಲ್ ಬಾಧಿತ ಪ್ರದೇಶದ ಮತಗಟ್ಟೆಗಳಿಗೆ ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ. ಅವರು ಎಎನ್‍ಎಫ್ ತಂಡಗಳ ಜೊತೆಗೆ ಕೆಲಸ ಮಾಡಲಿದ್ದಾರೆ.ಈಗಾಗಲೇ 17 ಪ್ಯಾರಾ ಮಿಲಿಟರಿ ಕಂಪನಿಗಳು ಬಂದಿದ್ದು ಅವುಗಳನ್ನು ಅಗತ್ಯವಿರುವ ಕಡೆಗಳಿಗೆ ನಿಯೋಜಿಸಲಾಗಿದೆ. 1800 ರಷ್ಟು ರಕ್ಷಣಾ ಸಿಬ್ಬಂಧಿಗಳು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದಾರೆ ಎಂದರು.48 ಗಂಟೆಗಳ ಕಾಲ ಒಣದಿನಗಳೆಂದು ಘೋಷಿಸಿ ಎಲ್ಲಾ ರೀತಿಯ ಮದ್ಯ ನಿಷೇಧ ಮಾಡಲಾಗಿದ್ದು, ಜಿಲ್ಲೆಯ ಎಲ್ಲಾ ಹೋಂಸ್ಟೇ, ರೆಸಾರ್ಟ್ ಮತ್ತು ವಸತಿ ಗೃಹಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ವ್ಯಕ್ತಿಗಳು ತಂಗಿದ್ದಾರೆಯೇ ಎನ್ನುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ಈಗಾಗಲೇ ಮುಂಜಾಗ್ರತಾ ಕ್ರಮವಾಗಿ 10 ಜನರನ್ನು ಗಡಿಪಾರು ಮಾಡಲಾಗಿದೆ. ಜಿಲ್ಲೆಯಾದ್ಯಂತ 144 ಸೆಕ್ಷನ್ ಇರುವ ಕಾರಣ ಎಲ್ಲಿಯೂ 5 ಕ್ಕಿಂತ ಹೆಚ್ಚು ಮಂದಿ ಒಂದೆಡೆ ಸೇರಬಾರದು. ಶಾಂತಿಯುತ ಮತದಾನಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಜಿ.ಪ್ರಭು ಇದ್ದರು.
ಜಿಲ್ಲೆಯಲ್ಲಿ ಒಟ್ಟು 9.73 ಲಕ್ಷ ಮತದಾರರು ಹಕ್ಕು ಚಲಾಯಿಸಲಿದ್ದಾರೆ. 1224 ಮತಗಟ್ಟೆಗಳಿವೆ, 5756 ಜನ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. 1700ಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!