April 29, 2024

MALNAD TV

HEART OF COFFEE CITY

ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ ಜಿಲ್ಲಾಡಳಿತ

1 min read

ಚಿಕ್ಕಮಗಳೂರು: ನೈರುತ್ಯ ಪದವೀಧರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ 9072, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 3675 ಮತದಾರರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣ ಕನಕ ರೆಡ್ಡಿ ತಿಳಿಸಿದರು.

ಮುಂಬರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಮತದಾರರ ಪಟ್ಟಿಯನ್ನು ಜಿಲ್ಲಾಡಳಿತ ಅಂತಿಮಗೊಳಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕ ರೆಡ್ಡಿ ಜಿಲ್ಲೆಯಲ್ಲಿ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಒಟ್ಟು 9072 ಜನ ಮತದಾರರಿದ್ದು ಅದರಲ್ಲಿ 5220 ಪುರುಷ ಹಾಗೂ 3852 ಮಹಿಳಾ ಮತದಾರರಿದ್ದಾರೆ. ಎಂಟು ತಾಲೂಕುಗಳಲ್ಲಿ 11 ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಎ.ಡಿ.ಸಿ ತಿಳಿಸಿದರು. ಅಂತೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಒಟ್ಟು 3675 ಮತದಾರರಿದ್ದು, ಅವರಲ್ಲಿ 2015 ಪುರುಷ ಹಾಗೂ 1660 ಜನ ಮಹಿಳಾ ಮತದಾರರಿದ್ದಾರೆ ಎಂದು ಅವರು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!