ಚಾಲಕನ ನಿಯಂತ್ರಣ ತಪ್ಪಿ ಹಂಪ್ಸ್ ಹಾರಿಸಿ ಡಿವೈಡರ್ ಗೆ ಢಿಕ್ಕಿ : ಮೂವರಿಗೆ ಗಂಭೀರ ಗಾಯ
1 min readತರಕಾರಿ ತುಂಬಲು ಮಹಿಳಾ ಕೂಲಿ ಕಾರ್ಮಿಕರನ್ನು ಕರೆ ತರುತ್ತಾ ವೇಗವಾಗಿ ಬರುತ್ತಿದ್ದ ಟಾಟಾ ಏಸ್ ವಾಹನ ಹಂಪ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಟಾಟಾ ಏಸ್ ನಲ್ಲಿದ್ದ ಮೂವರು ಕಾರ್ಮಿಕ ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ.
ನಗರದ ಹೊರವಲಯದ ಹೌಸಿಂಗ್ ಬೋರ್ಡ್ ಬಳಿ ಹಂಪ್ಸ್ ಕಾಣದೇ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದರಲ್ಲಿದ್ದ ಮೂವರು ಕೂಲಿ ಕಾರ್ಮಿಕ ಮಹಿಳೆಯರಿಗೆ ಗಂಭೀರವಾದ ಗಾಯಗಳಾಗಿವೆ. ನಗರದ ಹೌಸಿಂಗ್ ಬೋರ್ಡ್ ಸಮೀಪದ ಸಾಲು ಮರದಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಗಾಯಳು ಕಾರ್ಮಿಕ ಮಹಿಳೆಯರನ್ನ ಹಾಸನದ ಸರ್ಕಾರಿ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಂಪ್ಸ್ ಕಾಣಿಸದೇ ಏಕಾಏಕಿ ಚಲಾಯಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಪಲ್ಟಿ ಹೊಡೆದಿದೆ.
ಚಿಕ್ಕಮಗಳೂರು ನಗರ ಹೌಸಿಂಗ್ ಬೋರ್ಡ್ ಬಳಿ ಕೆಲವೆಡೆ ಅವೈಜ್ಞಾನಿಕವಾಗಿ ಹಂಪ್ಸ್ ಹಾಕಲಾಗಿದೆ ಎಂಬ ದೂರುಗಳು ಆಗಾಗ್ಗೆ ಕೇಳಿ ಬರುತ್ತಿದ್ದವು. ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g