ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರ್.!
1 min read
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿಯ ಹುಣಸೇಹಳ್ಳಿಯಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಬಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆಲ್ದೂರಿನಿಂದ ಬಾಳೆಹೊನ್ನೂರುವರೆಗೆ ರಸ್ತೆಯೂ ಸಂಪೂರ್ಣ ಗುಂಡಿಮಯವಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಈ ರಸ್ತೆಯೂ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಬಾಳೆಹೊನ್ನೂರು ರಂಭಾಪುರಿ ಪೀಠ, ಶೃಂಗೇರಿ ಶಾರದಾ ಪೀಠ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ ಹಾಗೂ ಹಲವು ಪ್ರವಾಸಿ ತಾಣಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಶೃಂಗೇರಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣ ವಿದ್ಯುತ್ ಟ್ರಿಪ್ ಆಗಿದ್ದು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

