June 20, 2024

MALNAD TV

HEART OF COFFEE CITY

ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಸಹಿತ ಚಾಲಕ ದುರ್ಮರಣ

1 min read

 

 

ಕೆರೆ ಏರಿ ಮೇಲೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಯೊಳಗೆ ಮುಳುಗಿ ಓರ್ವ ಮೃತಪಟ್ಟು ಮತ್ತೋರ್ವ ಪಾರಾದ ಘಟನೆ ಅಂಬಳೆ ಬಳಿ ನಡೆದಿದೆ. ಸತತ ಮಳೆಯಿಂದಾಗಿ ತುಂಬಿದ್ದ ಅಂಬಳೆ ಕೆರೆ ತುಂಬಿದ್ದು ಅವಘಡಕ್ಕೆ ಕಾರಣವಾಗಿದೆ.

 

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರಿನಲ್ಲಿದ್ದ ಚಾಲಕ ಕಾರು ಸಮೇತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ, ಚಿಕ್ಕಮಗಳೂರು ತಾಲೂಕಿನ ಅಂಬಳೆ ಕೆರೆಯಲ್ಲಿ ಘಟನೆ ನಡೆದಿದೆ. ಕಳೆದ ತಡರಾತ್ರಿ ಕೆರೆ ಏರಿ ಮೇಲೆ ನಿಯಂತ್ರಣ ಕಳೆದು ಕೊಂಡು ಅವಘಡ ಸಂಭವಿಸಿದೆ.

ಅಂಬಳೆ ಗ್ರಾಮದ ರಮೇಶ್ (33) ಮೃತ ದುರ್ದೈವಿಯಾಗಿದ್ದು, ಕಾರಿನಲ್ಲಿದ್ದ ಮತ್ತೋರ್ವ ಸಂತೋಷ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರದೊಂದಿಗೆ ಕಾರನ್ನು ಮೇಲಕ್ಕೆ ಎತ್ತುವ ಕಾರ್ಯ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕು ಅಂಬಳೆ ಗ್ರಾಮದ ಕೆರೆ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೀರು ಕೆರೆಯು ಅರ್ಧ ತುಂಬಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!