April 28, 2024

MALNAD TV

HEART OF COFFEE CITY

ಕೊರೋನಾ ತುರ್ತು ಸಂದರ್ಭದಲ್ಲೂ ಉಸ್ತುವಾರಿ ಸಚಿವರನ್ನು ನೇಮಿಸಿದ ಸರ್ಕಾರ : ಅಧಿಕಾರಿಗಳ ಹೆಗಲೇರಿದ ಜವಾಬ್ದಾರಿ

1 min read

 ಚಿಕ್ಕಮಗಳೂರು : ಸಮುದ್ರದೊಂದಿಗೆ ನೆಂಟಸ್ಥಿಕೆ, ಉಪ್ಪಿನೊಂದಿಗೆ ಬಡತನ ಎಂಬಂತಾಗಿದೆ ಚಿಕ್ಕಮಗಳೂರು ಜಿಲ್ಲೆಯ ಪರಿಸ್ಥಿತಿ. ಕೇಂದ್ರ ಮತ್ತು ರಾಜ್ಯವನ್ನು ಬಿ.ಜೆ.ಪಿ ಪಕ್ಷದ ಜನಪ್ರತಿನಿಧಿಗಳು ಆಳುತ್ತಿದ್ದಾರೆ ರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನ ಪಡೆದಿರುವ ನಾಯಕರು, ರಾಜ್ಯ ಸರ್ಕಾರದಲ್ಲಿ ಉನ್ನತ ಪದವಿ ಪಡೆದಿರುವ ಬಿ.ಜೆ.ಪಿ. ಪಕ್ಷದ ಘಟಾನುಘಟಿ ನಾಯಕರುಗಳು ಜಿಲ್ಲೆಯಲ್ಲಿದ್ದರು ಸರ್ಕಾರಗಳು ಕಾಫಿನಾಡನ್ನ ಸಂಪೂರ್ಣ ನಿರ್ಲಕ್ಷಿಸಿದ್ದು, ಇದು ಜನ ಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯ ಸರ್ಕಾರ ಪ್ರತಿ ಜಿಲ್ಲೆಗೆ ಒಬ್ಬರಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದರು, ಕಾಫಿನಾಡಿಗೆ ಕಳೆದ 5 ತಿಂಗಳುಗಳಿಂದ  ಉಸ್ತುವಾರಿ ಸಚಿವರ ನೇಮಕಕ್ಕೆ ಗ್ರಹಣ ಹಿಡಿದಂತಿದೆ. ಪ್ರಭಾರಿ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಅರವಿಂದ ಲಿಂಬಾವಳಿ ಜನವರಿ 26 ರಂದು ನೇತಾಜಿ ಸುಭಾಷ್ ಚಂದ್ರ ಭೋಸ್ ಜಿಲ್ಲಾ ಆಟದ ಮೇದಾನದಲ್ಲಿ ಧ್ವಜಾರೋಹಣ ಮಾಡಿದ್ದು ಈಗ ನೆನಪಿನ ಮಾತಾಗಿದೆ. ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಬಿ.ಜೆ.ಪಿ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಅಂತರ ರಾಜ್ಯಗಳ ಚುನಾವಣೆಯಲ್ಲಿ ಬಿಸಿಯಾಗಿದ್ದರು. ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಉಪಸಭಾಪತಿಗಳಾಗಿ ಕಾರ್ಯಭಾರ ಮಾಡುತ್ತಿದ್ದಾರೆ. ಇಷ್ಟೇಲ್ಲಾ ಉನ್ನತ ಪದವಿಗಳ ನಾಯಕರುಗಳು ಹಾಗೂ ಶೃಂಗೇರಿ ಒರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಬಿ.ಜೆ.ಪಿ. ಪಕ್ಷದ ಶಾಸಕರೆ ಹೆಚ್ಚಿದ್ದಾರೆ. ಆದರೆ ಕೋವಿಡ್ ಸಂಕಷ್ಟದಲ್ಲೂ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡದೆ ಇರುವುದರಿಂದ ಆರೋಗ್ಯ ಇಲಾಖೆಯ ಸಮಸ್ಯೆಗೆ ಸ್ಪಂಧಿಸೋರೆ ಇಲ್ಲದಂತಾಗಿದೆ. ಕಾಫಿನಾಡು ಕೊರೋನ ಭಾದಿತರಲ್ಲಿ 10 ನೇ ಸ್ಥಾನದಲ್ಲಿದೆ ಎನ್ನುತ್ತಿದ್ದಾರೆ ತಜ್ಞರು, ಜಿಲ್ಲೆಯಲ್ಲಿ ದಿನಕಳೆದಂತೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಾದರೂ ಉಸ್ತುವಾರಿ ಸಚಿವರನ್ನು ನೇಮಕ ಮಾಡದೆ ರಾಜ್ಯ ಸರ್ಕಾರ ಜವಬ್ದಾರಿಯನ್ನು ಅಧಿಕಾರಿಗಳ ಹೆಗಲಿಗೆ ಜಿಲ್ಲೆ ಕೊಟ್ಟು ಮೌನಕ್ಕೆ ಶರಣಾಗಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದಂತೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್‌ನ ಸ್ಥಿತಿ ಇದೆ. ಇನ್ನೂ ದೊಡ್ಡ-ದೊಡ್ಡ ಆಸ್ಪತ್ರೆಗಳಂತೂ ಕನಸಿನ ಮಾತಾಗಿದೆ. ಅಕ್ಕ-ಪಕ್ಕದ ಜಿಲ್ಲೆಯ ಆಸ್ಪತ್ರೆಗಳು ಈಗಾಗಲೇ ಕೊರೋನಾ ಸೋಂಕಿತರಿಂದ ಭರ್ತಿಯಾಗಿದೆ. ಜಿಲ್ಲೆಯಲ್ಲಿ ಸದ್ಯ ಪ್ರತಿದಿನ ಸರಾಸರಿ 300ಕ್ಕೂ ಹೆಚ್ಚು ಪ್ರಕರಣಗಳ ವರದಿಯಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನಕ್ಕೆ ಸಾವಿರ ದಾಟಿದ್ರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಗಡ್ಡಕ್ಕೆ ಬೆಂಕಿ ಬಿದ್ದ ಮೇಲೆ ಬಾವಿ ತೆಗೆದರೂ ಎನ್ನುವಂತೆ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಿದ ನಂತರ ಎಚ್ಚೆತ್ತುಕೊಳ್ಳುವ ಬದಲೂ, ಜಿಲ್ಲೆಯಲ್ಲಿರುವ ಆರಂಭಿಕ ಸಮಸ್ಯೆಗಳಿಗೆ ಪರಿಹಾರವಾಗಿ ಉಸ್ತುವಾರಿ ಸಚಿವರನ್ನು ನೇಮಕ ಮಾಡುವಲ್ಲಿ ಜಿಲ್ಲೆಯ ಘಟಾನುಘಟಿ ನಾಯಕರುಗಳು ಹಾಗೂ ರಾಜ್ಯ ಸರ್ಕಾರ ಮುಂದಾಗುತ್ತದೆಯೇ ಕಾದು ನೋಡಬೇಕು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!