April 29, 2024

MALNAD TV

HEART OF COFFEE CITY

ಕನ್ನಡ ನಾಡು ನುಡಿಯ ಅಸ್ಮಿತೆಯನ್ನು ಉಳಿಸಿ, ಬೆಳೆಸಬೇಕು; ಭಂಡಾರಿ ಶ್ರೀನಿವಾಸ್

1 min read

ಚಿಕ್ಕಮಗಳೂರು: ಕನ್ನಡ ನಾಡು ನುಡಿ ಇದರ ಅಸ್ಮಿತೆಯನ್ನು ಉಳಿಸಿಕೊಂಡು ಬೆಳೆಸಬೇಕಾದ ಅನಿವಾರ್ಯತೆ ಪ್ರತಿಯೊಬ್ಬರ ಮೇಲು ಇದ್ದು, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ಕಡೂರು ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕಡೂರು ಹಾಗೂ ಕಡೂರು ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಕಡೂರಿನ ಗಣಪತಿ ಪೆಂಡಾಲ್ ಸಮೀಪದ ರಾಘವೇಂದ್ರ ಸ್ಟೋರ್ ಪಕ್ಕದಲ್ಲಿ ತಾಯಿ ಭುವನೇಶ್ವರಿ ದೇವಿಯ ಪುತ್ಥಳಿಯನ್ನು ಪ್ರತಿಷ್ಠಾಪಿಸಲು ಗುದ್ದಲಿ ಪೂಜೆಯನ್ನು ನೆರವೇರಿಸಿ, ತಾಯಿ ಭುವನೇಶ್ವರಿ ದೇವಿ ಪುತ್ಥಳಿ ಕಡೂರು ಪಟ್ಟಣದಲ್ಲಿ ಸ್ಥಾಪಿಸುತ್ತಿರುವುದು ಹೆಮ್ಮೆಯ ಸಂಗತಿ ಇದಕ್ಕಾಗಿ ಜನಪ್ರತಿನಿಧಿಗಳಾದ ನಾವೆಲ್ಲರೂ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿಯೇ ಕಸಾಪ ಮಹಿಳಾ ಘಟಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭುವನೇಶ್ವರಿ ದೇವಿಯ ಪುತ್ತಳಿಯನ್ನು ಸ್ಥಾಪನೆ ಮಾಡುತ್ತಿರುವುದು ಇದೇ ಮೊದಲು ಎಂದು ತಿಳಿಸಿದರು.

ಭುವನೇಶ್ವರಿ ದೇವಿಯ ಪುತ್ಥಳಿಯನ್ನು ಪ್ರತಿಷ್ಠಾಪಿಸಲು ಕಾರಣಕರ್ತರಾದ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾದ ಲತಾ ರಾಜಶೇಖರ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾದ ಸವಿತಾ ಸತ್ಯನಾರಾಯಣ ಹಾಗೂ ಜಿಲ್ಲಾ ಸಂಚಾಲಕರಾದ ಪದ್ಮಾವತಿ ಸೂರಿ ಶ್ರೀನಿವಾಸ್ ಅವರು ಪೂಜೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿಂಗಟಗೆರೆ ಸಿದ್ಧಪ್ಪ, ಗೌರವ ಕಾರ್ಯದರ್ಶಿಗಳಾದ ಕುಪ್ಪಾಳು ಶಾಂತಮೂರ್ತಿ,ಬಿ.ಚಂದ್ರಶೇಖರ್, ಗೌರವಾಧ್ಯಕ್ಷ ಆರ್.ಜಿ.ಕೃಷ್ಣಸ್ವಾಮಿ, ಬುಕ್ಕಸಾಗರ ರಾಜಶೇಖರ್ ಪುರಸಭೆಯ ಸದಸ್ಯರಾದ ಮರಗುದ್ದಿ ಮನು, ಶ್ರೀಕಾಂತ್ , ಸಿಂಗಟಗೆರೆ ಹೋಬಳಿ ಕಸಾಪ ಅಧ್ಯಕ್ಷೆ ಷಪೀತ ಬೇಗಂ, ಯಗಟಿ ಹೋಬಳಿ ಕಸಾಪ ಅಧ್ಯಕ್ಷ ರುದ್ರಾಚಾರ್, ಸಿಂಗಟಗೆರೆ ಹೋಬಳಿ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕಲ್ಲೇಶ್, ಪಂಚನಹಳ್ಳಿ ಹೋಬಳಿ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಶ್ರೀನಿವಾಸ್, ಬೀರೂರು ಹೋಬಳಿ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸ್ಮಿತಾ ಮಹೇಂದ್ರ, ಪದಾಧಿಕಾರಿಗಳಾದ ಶೋಭಾ ಶ್ರೀನಿವಾಸ್, ಪದ್ಮಾ ಶ್ರೀನಿವಾಸ್, ದೀಪ, ರೂಪಾ, ದಾಕ್ಷಾಯಿಣಿ, ಸಖರಾಯಪಟ್ಟಣ ಹೋಬಳಿ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ವನಮಾಲ, ಚಕ್ರವರ್ತಿ ಕಲಾ ಸಂಘದ ಅಧ್ಯಕ್ಷರಾದ ಕೇಶವನಾಯ್ಕ, ಕಾರ್ಯದರ್ಶಿ ಚಂದ್ರು, ವಿನೋದ್ ಸೇರಿದಂತೆ ಹಲವಾರು ಜನರು ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!