April 29, 2024

MALNAD TV

HEART OF COFFEE CITY

ಚಿನ್ನದ ಅಂಗಡಿ ಮಾಲೀಕನಿಗೆ ಸಾರ್ವಜನಿಕರಿಂದ ಧರ್ಮದೇಟು..!

1 min read

ಚಿಕ್ಕಮಗಳೂರು : ಚಿನ್ನದ ಅಂಗಡಿಗೆ ಬರುವ ಮಹಿಳೆಯರ ಜೊತೆ ಅಸಭ್ಯ ವರ್ತನೆ ತೋರಿದ್ದಕ್ಕೆ ಚಿನ್ನದ ಅಂಗಡಿ ಮಾಲೀಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ತರೀಕೆರೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ನಡೆದಿದೆ. ಚಿನ್ನದ ಅಂಗಡಿಗೆ ಬಂದಂತಹ ಅಪ್ರಾಪ್ತ ವಯಸ್ಸಿನ ಬಾಲಕಿಯ ಜೊತೆ ಅಸಭ್ಯ ವರ್ತನೆ ಮಾಡಿದಕ್ಕೆ ಚಿನ್ನದ ಅಂಗಡಿ ಮಾಲೀಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಮೀರ್ ಎಂಬ ಚಿನ್ನದ ವ್ಯಾಪಾರಿಯು ಅಸಭ್ಯ ವರ್ತನೆ ಮಾಡಿದಕ್ಕೆ ಬಾಲಕಿಯ ತಾಯಿ ಸೇರಿದಂತೆ ಸಾರ್ವಜನಿಕರು ತಕ್ಕ ಉತ್ತರ ನೀಡಿದ್ದಾರೆ. ಅಮೀರ್ ಗೆ ಬಾಲಕಿಯ ತಾಯಿ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆಯು ನಾಲ್ಕು ದಿನದ ಹಿಂದೆ ನಡೆಡಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಈ ಪ್ರಕರಣವು ತರೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!