May 14, 2024

MALNAD TV

HEART OF COFFEE CITY

ಗಿರಿಭಾಗದಲ್ಲಿ ಅರಳಿ ನಿಂತ ಅಪರೂಪದ ಕುರುವಂಜಿ ಹೂ, ಕಣ್ಮನ ಸೆಳೆಯೋದ್ರ ಜೊತೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ ಕುರುವಂಜಿ ಹೂ

1 min read

ಚಿಕ್ಕಮಗಳೂರು : 12 ವರ್ಷಗಳಿಗೊಮ್ಮೆ ಅರಳೋ ಕುರುವಂಜಿ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ. ಕಣ್ಣು ಹಾಯಿಸಿದಲೆಲ್ಲಾ ಕಾಣೋ ಅಪರೂಪದ ನೀಲಿ ಕುರುವಂಜಿ ನೋಡುಗರ ಕಣ್ಮನ ಸೆಳೆಯೋದ್ರ ಜೊತೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. 12 ವರ್ಷಗಳಿಗೊಮ್ಮೆ ಅರಳೋ ಕುರುವಂಜಿ ಚಿಕ್ಕಮಗಳೂರಿನ ಹೂವು ತಿಂಗಳುಗಳ ಕಾಲ ತನ್ನ ಸೌಂದರ್ಯವನ್ನ ಹೊರಚೆಲ್ಲುತ್ತಾ ಚಂದ್ರದ್ರೋಣ ಪರ್ವತ ಶ್ರೇಣಿಯ ಮತ್ತೊಂದು ಸೌಂದರ್ಯಕ್ಕೆ ಸಾಕ್ಷಿಯಾಗಿರುತ್ತೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಕಾಫಿನಾಡಿನ ಗಿರಿ-ಪರ್ವತ ಶ್ರೇಣಿಗಳ ಸಾಲು ನೀಲಿ ರೂಪ ಪಡೆದುಕೊಳ್ತಿವೆ. ಬೆಟ್ಟ-ಗುಡ್ಡಗಳೆಲ್ಲಾ ನೀಲಿಯಾಗಿ ಕಂಗೊಳಿಸೋ ಕಾಲ ಸನ್ನಿಹಿತ. ರಸ್ತೆಯ ಇಕ್ಕೆಲಗಳಲ್ಲಿ ಅರಳಿ ನಿಂತಿರೋ ಈ ಕುರುವಂಜಿ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಪಶ್ಚಿಮಘಟ್ಟ ಅರಣ್ಯ ವ್ಯಾಪ್ತಿಯ ಸಾಲಿನಲ್ಲಿ ಮಾತ್ರ ಅರಳೋ ಈ ಹೂವು ಕಾಫಿನಾಡಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಅರಳಿ ನಿಂತಿದೆ. ಮುಳ್ಳಯ್ಯನಗಿರಿಗೆ ಹೋಗುವ ಮಾರ್ಗದ ಸೀತಾಳಯ್ಯನಗಿರಿ ಭಾಗದಲ್ಲಿ ಹುಲುಸಾಗಿ ಅರಳಿ ನಿಂತಿದೆ. ಪ್ರವಾಸಿಗರು ಸೀತಾಳಯ್ಯನಗಿರಿಗೆ ಹೋಗುತ್ತಿದ್ದಂತೆ ಪ್ರವಾಸಿಗರನ್ನ ಸ್ವಾಗತಿಸೋದು ಈ ನೀಲಿ ಕುರುವಂಜಿ ಹೂ. ಪಶ್ವಿಮಘಟ್ಟ ಸಂರಕ್ಷಿತ ಪ್ರದೇಶವಾಗಿರೋದ್ರಿಂದ ಈ ಹೂವು ಇನ್ನೂ ಜೀವಂತವಾಗಿದ್ದು, ಪ್ರತಿ 12 ವರ್ಷಕೊಮ್ಮೆ ಕಾಫಿನಾಡನ್ನ ಭೂ ಲೋಕದ ಸ್ವರ್ಗವಾಗಿಸ್ತಿದೆ.

 

 

ಈ ಹೂವಿಗೆ ಧಾರ್ಮಿಕವಾಗಿಯೂ ಇತಿಹಾಸವಿದೆ. ಸುಬ್ರಹ್ಮಣ್ಯ ವೆಳ್ಳಿನ ಮದುವೆಯಾಗುವಾಗ ಈ ಹೂವಿನ ಮಾಲೆ ಹಾಕಿದ್ರಿಂದ ಈ ಗುರ್ಗಿಯನ್ನ ಪ್ರೇಮದ ಸಂಕೇತವಾಗಿ ಪ್ರೇಮದ ಹೂ ಅಂತಲು ಕರೆಯುತ್ತಾರೆ ಕೇರಳ, ತಮಿಳುನಾಡಿಗರು. ಆದ್ದರಿಂದ ಈ ಹೂವು ಅರಳಿದ ಕೂಡಲೇ ಮೊದಲು ಸುಬ್ರಹ್ಮಣ್ಯನಿಗೆ ಅರ್ಪಿಸುತ್ತಾರೆ. ಮಳೆ, ಗಾಳಿ, ನೀರು, ಬೆಳಕು ಹಾಗೂ ಪ್ರಕೃತಿಯ ಸಮತೋಲನವಾಗಿದ್ದಾಗ ಮಾತ್ರ ಈ ಹೂ ಅರಳಲಿದೆ. ಗುರ್ಗಿ ಹೂವಿನಲ್ಲಿ ನಾನಾ ವಿಧಗಳಿದ್ದು, 5, 7, 12, 14 ವರ್ಷಗಳಿಗೆ ಅರಳೋ ಪ್ರಭೇದ ಹೂವುಗಳೂ ಇವೆ. ಈ ಹೂವುಗಳು ಅರಳಿ ನಿಂತಾಗ ಇದರ ಕಾಂಡದಲ್ಲಿ ಔಷಧಿಯ ಗುಣಗಳಿರೋದ್ರಿಂದ ನಾನಾ ಖಾಯಿಲೆಗೂ ಬಳಸುತ್ತಾರೆ. ಸದ್ಯಕ್ಕೆ ಕಾಫಿನಾಡಿನ ಗಿರಿಶಿಖರಗಳಲ್ಲಿ ಅರಳಿ ನಿಂತಿರೋ, ಮತ್ತಷ್ಟು ಅರಳೋ ಸನಿಹದಲ್ಲಿದ್ದು ಬೆಟ್ಟಗುಡ್ಡಗಳ ಸೌಂದರ್ಯವನ್ನೆ ಬದಲಿಸಿ, ನೋಡುಗನ ಕಣ್ಮನದಲ್ಲಿ ಅಚ್ಚಳಿಯದೆ ಉಳಿದಿದೆ.

ಒಟ್ಟಾರೆ, ಪ್ರಕೃತಿಯ ಒಡಲಾಳದಲ್ಲಿ ಇನ್ನೆಷ್ಟು ಸೌಂದರ್ಯದ ರಾಶಿ ಮನೆ ಮಾಡಿದ್ಯೊ ಬಲ್ಲೋರ್ಯಾರು ಇಲ್ಲ. ಕಾಫಿನಾಡಲ್ಲಿ ಒಂದೊಂದು ಕಾಲದಲ್ಲೂ ಒಂದೊಂದು ರೀತಿಯ ಸೌಂದರ್ಯ ಮನೆ ಮಾಡಿರುತ್ತೆ. ಈವರೆಗೆ ಹಸಿರಿನಿಂದ ಕಂಗೊಳಿಸೋ ಬೆಟ್ಟಗುಡ್ಡಗಳನ್ನ ನೋಡಿದ್ದ ನಾವು-ನೀವು ಇನ್ಮುಂದೆ ನೀಲಿ ಬೆಟ್ಟಗಳನ್ನ ನೋಡ್ಬೇಕು ಅಂದ್ರೆ, ಕಾಫಿನಾಡಿಗೆ ಬರಲೇಬೇಕು. ತಿಂಗಳ ಕಾಲ ಅರಳಿ ನಿಲ್ಲೋ ಇಲ್ಲಿನ ಸೌಂದರ್ಯಕ್ಕೆ ಸರಿಸಾಟಿ ಮತ್ತೊಂದಿಲ್ಲ ಅನ್ನೋದಂತು ಸತ್ಯ…..

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!