May 2, 2024

MALNAD TV

HEART OF COFFEE CITY

ಮಳೆಯ ಅಬ್ಬರಕ್ಕೆ ಮೈದುಂಬಿ ಹರಿಯುತ್ತಿರುವ ನದಿಗಳು ಜನ ಜೀವನ ಅಸ್ತವ್ಯಸ್ತ

1 min read

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ಧಾರಾಕಾರ ಮಳೆ ನಿನ್ನೆಯಿಂದ ಎಡಬಿಡದೇ ಸುರಿಯುತ್ತಿದೆ. ಭಾರೀ ಮಳೆಗೆ ಕಾಫಿನಾಡಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವು ಹೆಚ್ಚಳಗೊಂಡಿದೆ. ಹೆಚ್ಚಳವಾಗಿದೆ. ಮಲೆನಾಡಿನ ಕೆಲ ಭಾಗದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ.

ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರದಿಂದಾಗಿ ಜಯಪುರದಿಂದ ಬಸರಿಕಟ್ಟೆ ಹೋಗುವ ರಸ್ತೆ ಮಾರ್ಗದಲ್ಲಿ ಮರವು ಉರುಳಿ ಬಿದ್ದಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕಳಸ-ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಹೆಬ್ಬಾಳೆ ಸೇತುವೆ ಮುಳುಗುವ ಭೀತಿಯಲ್ಲಿದೆ. ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿನ್ನಡಿ ಗ್ರಾಮದ ಬಳಿ ಗುಡ್ಡ ಕುಸಿತಗೊಂಡಿದೆ. ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!