April 29, 2024

MALNAD TV

HEART OF COFFEE CITY

ವೀಕೆಂಡ್ ಕರ್ಫ್ಯೂ ಸರ್ಕಾರದ ಅವೈಜ್ಞಾನಿಕ ತೀರ್ಮಾನ: ಎಸ್.ಎಲ್ ಭೊಜೇಗೌಡ

1 min read

 

ಚಿಕ್ಕಮಗಳೂರು: ಸರ್ಕಾರದ ವೀಕೆಂಡ್ ಕರ್ಫ್ಯೂ ಹಾಗೂ ಲಾಕ್ ಡೌನ್ ನಿರ್ಧಾರ ಅವೈಜ್ಞಾನಿಕ, ಕೊರೊನಾ ತಡೆಗಟ್ಟಲು ಇದೊಂದೆ ಮಾರ್ಗ ಅಲ್ಲ ಪರ್ಯಾಯ ಕ್ರಮಗಳನ್ನು ಸರ್ಕಾರ ತಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಹೇಳಿದರು.ನಗರದ ಪ್ರೆಸ್ ಕ್ಲಬ್ ನಲ್ಲಿ‌ ಈ ಕುರಿತು ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲೆಯಂತಹ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮವನ್ನು ನೆಚ್ಚಿಕೊಂಡು ನೂರಾರು ಕುಟುಂಬಗಳು ಜೀವನ ನಡೆಸುತ್ತಿವೆ ಇದನ್ನು ಸರ್ಕಾರ ಅರಿತುಕೊಳ್ಳಬೇಕು ಹಾಗೂ ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ಹಾಗೂ ದಿನ ನಿತ್ಯ ದುಡಿದು ಬದುಕು ಸಾಗಿಸುವವರಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

ಇನ್ನು ಇದೇ ವೇಳೆ ಮಾತನಾಡಿದ ಅವರು, ಪಾದಯಾತ್ರೆಯ ನೆಪದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆಗುತ್ತಿದ್ದರೂ ಕ್ರಮ ತೆಗೆದುಕೊಳ್ಳದೇ ಇರುವುದು ಸರ್ಕಾರಕ್ಕೆ ದಮ್ ಇಲ್ಲ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ವ್ಯಂಗ್ಯವಾಡಿದರು.

ಆರೋಗ್ಯ ತಪಾಸಣೆಗೆ ತೆರಳಿದ್ದ ಅಧಿಕಾರಿಯನ್ನು ಬೆದರಿಸಿ ಸವಾಲು ಹಾಕುವ ರೀತಿಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ .ಕೆ.ಶಿವಕುಮಾರ್ ಉದ್ದಟತನ ಪ್ರದರ್ಶಿಸಿದ್ದರೂ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದೇ ಇರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

 

 

ಅನೇಕ ಬಾರಿ ಸಚಿವರಾಗಿದ್ದು ,ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಧಮ್ ಇದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿರುವುದು ಪಕ್ಷ ಹಾಗೂ ವ್ಯಕ್ತಿತ್ವಕ್ಕೆ ಕಳಂಕ ಹಾಗೂ ಕಪ್ಪು ಚುಕ್ಕೆಯ ಸಂಗತಿ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!