ವೈದ್ಯನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಗೆ ಸೆ.18 ರವರೆಗೂ ನ್ಯಾಯಾಂಗ ಬಂಧನ
1 min read
ಜಿಲ್ಲಾಸ್ಪತ್ರೆ ವೈದ್ಯ ವೆಂಕಟೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಸೆಪ್ಟೆಂಬರ್ 18 ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಜೊತೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚಿಸಿದೆ.
ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ವಿಚಾರವಾಗಿ ವೈದ್ಯರ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರಪುರ ಸಮೀಪದ ತಸ್ಲಿಮಾ ಎಂಬ ಮಹಿಳೆಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಮಾಡಿ ತಾನೂ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿಯೇ ಬಂಧಿಸಿದ ನಗರ ಠಾಣಾ ಪೊಲೀಸರು ಆಂಬುಲೆನ್ಸ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಮಹಿಳೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಜಡ್ಜ್ ಸೂಚಿಸಿದ್ದಾರೆ.
ವೈದ್ಯನ ಮೇಲೆ ಹಲ್ಲೆಗೈದ ಮಹಿಳೆಗೆ ಇದೇ ಸೆಪ್ಟೆಂಬರ್ 18 ರವರೆಗೂ ಅಂದರೆ ಮುಂದಿನ 8 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಹಲ್ಲೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ಹಲವು ನೂತನ ಸೆಕ್ಷನ್ ಗಳ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g