May 19, 2024

MALNAD TV

HEART OF COFFEE CITY

ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಧೀರ್ಘವಾದ ಪರಿಣಾಮವಾಗುತ್ತದೆ ಜಿ. ಪ್ರಭು

1 min read

ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಧೀರ್ಘವಾದ ಪರಿಣಾಮವಾಗುತ್ತದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ. ಪ್ರಭು ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಇವರ ವತಿಯಿಂದ ನಗರದ ತಹಸೀಲ್ದಾರ್ ಕಛೇರಿ ಆವರಣದಲ್ಲಿ ಗುಲಾಬಿ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಂಬಾಕು, ಮಧ್ಯಪಾನ ಧೂಮಪಾನದಂತಹ ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗ ಬೇಕು. ತಂಬಾಕು ಮಾರಾಟ ಹಾಗೂ ಸೇವನೆ ವಿರುದ್ಧ ಸರ್ಕಾರ ಕಾನೂನು ರೂಪಿಸಿದೆ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಕುರಿತು ಪ್ರಚಾರ ಮಾಡುವುದನ್ನು ಸೆಕ್ಷನ್ ೫ ರ ಪ್ರಕಾರ ನಿಷೇಧಿಸಲಾಗಿದೆ. ಸೆಕ್ಷನ್ ೬ ಎ ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡುವುದನ್ನು, ಸೆಕ್ಷನ್ ೬ ಬಿ ನಲ್ಲಿ ಶಾಲಾ ಕಾಲೇಜುಗಳ ವ್ಯಾಪ್ತಿಯ ೧೦೦ ಘಜ ಸುತ್ತಳತೆಯಲ್ಲಿ ತಂಬಾಕು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇದಕ್ಕೆಲಾ ಮುಖ್ಯ ಕಾರಣ ತಂಬಾಕು ಸೇವನೆಯಿಂದ ಜನರು ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ದೇಶದಲ್ಲಿ ಪ್ರತಿ ವರ್ಷ ೧೦ ಲಕ್ಷ ಜನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಿದ್ದು, ಇದರಲ್ಲಿ ೮ ೧/೨ ಲಕ್ಷ ಜನ ತಂಬಾಕು ಸೇವನೆಯಿಂದ ಕ್ಯಾನ್ಸರ್‌ಗೆ ಬಲಿಯಾಗಿ ಸಾವನ್ನಪ್ಪುತ್ತಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಸಂಗತಿ. ಇದರಿಂದ ಸಾಕಾಷ್ಟು ಮನೆಗಳು ಅನಾಥವಾಗುತ್ತಿವೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್. ಸೋಮ ಮಾತನಾಡಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಮೂಲಕ ತಂಬಾಕು ಮುಕ್ತ ದೇಶವನ್ನಾಗಿ ಮಾಡಬೇಕು. ತಂಬಾಕು ಮಾರಾಟ ಮತ್ತು ಸೇವನೆಗೆ ಕಠಿಣ ಕಾನೂನುಗಳನ್ನು ರೂಪಿಸಲಾಗಿದೆ, ಜನಸಾಮಾನ್ಯರು ಸಹಕರಿಸಿದಾಗ ಮಾತ್ರ ಇತಂಹ ದುಶ್ಚಟಗಳಿಗೆ ಕಡಿವಾಣ ಹಾಕಬಹುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಂಜುನಾಥ್ ಮಾತನಾಡಿ ವಿಶ್ವದಲ್ಲಿ ಕ್ಯಾನ್ಸರ್ ನಿಂದ ಪ್ರತಿನಿತ್ಯ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆಯಿಂದ ಬರುವ ಕ್ಯಾನ್ಸರ್‌ನಿಂದ ಪ್ರತಿ ದಿನ ೨,೦೦೦ ದಿಂದ ೨,೨೦೦ ಜನರು ತಂಬಾಕು ಸೇವನೆಯಿಂದ ಬರುವ ಕ್ಯಾನ್ಸರ್‌ನಿಂದ ಮರಣ ಹೊಂದುತ್ತಿದ್ದಾರೆ. ಈ ಸಾವುಗಳು ಕಡಿಮೆಯಾಗಬೇಕು ಎಂದರೆ ಜನರು ತಂಬಾಕು ಸೇವನೆಯಿಂದ ದೂರವಿರಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಸಲ್ಲುವಾಗಿ ಗುಲಾಬಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಆರೋಗ್ಯ ಇಲಾಖೆ ಜಲಜಾಕ್ಷಿ ಎಲ್ಲರನ್ನು ಸ್ವಾಗತಿಸಿದರು.ಉಪವಿಭಾಗಾಧಿಕಾರಿ ರಾಜೇಶ್, ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಅಶ್ವಥ್ ಬಾಬು, ಮುಂತಾದವರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!