ಕಾಫಿನಾಡಲ್ಲೂ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧನ
1 min read
ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಅಂದರ್ ಆದ ಬೆನ್ನಲ್ಲೇ ಕಾಫಿನಾಡಲ್ಲೂ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧಿಸಿರುವ ಘಟನೆ ಮೂಡಿಗೆರೆ ತಾಲೂಕು ಹುಲ್ಲೇಮನೆ ಗ್ರಾಮದಲ್ಲಿ ನಡೆದಿದೆ.
ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಅವರನ್ನು ಈ ವಿಚಾರವಾಗಿ ನಿನ್ನೆ ಮನೆಯಿಂದ ಕರೆತರಲಾಗಿತ್ತು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು
ಹುಲಿ ಉಗುರು ಮಾರುತ್ತಿದ್ದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜಿಲ್ಲೆಯಲ್ಲೂ ಕೂಡ ಈ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು ಹುಲಿ ಉಗುರು ಧರಿಸಿದ್ದ ಇಬ್ಬರು ಆರೋಪಿಗಳು ಬಂಧಿಸಿದ್ದಾರೆ.
ಸತೀಶ್, ರಂಜಿತ್ ಬಂಧಿತ ಆರೋಪಿಗಳು. ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ಇಬ್ಬರು ಬಂಧಿತ ಆರೋಪಿಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿನ ಒಂದು ಡಾಲರ್ ವಶಪಡಿಸಿಕೊಂಡಿದ್ದಾರೆ.
ಆದರೆ ಹುಲಿ ಉಗುರು ಮಾರುತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ನಾಪತ್ತೆಯಾದ ಇಬ್ಬರ ಬಂಧನಕ್ಕೆ ಶೋಧಕಾರ್ಯ ಮುಂದುವರೆದಿದೆ. ಈ ಸಂಬಂಧ ಸ್ಥಳೀಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g