May 5, 2024

MALNAD TV

HEART OF COFFEE CITY

ಒಬ್ಬಳನ್ನೇ ಮದುವೆಯಾದ ಇಬ್ಬರು, ಪತ್ನಿಗಾಗಿ ಇಬ್ಬರು ಗಂಡಂದಿರ ಫೈಟ್, ಕಿಡ್ನಾಪ್ ವೇಳೆ ಸಿಕ್ಕಿಬಿದ್ದ 2ನೇ ಗಂಡ

1 min read

ಪತ್ನಿಗೆ ಮೆಸೇಜ್ ಮಾಡಿದ ಮೊದಲ ಗಂಡನನ್ನು ಎರಡನೇ ಗಂಡ ಸಿನಿಮಾ ರೀತಿ ಕಿಡ್ನ್ಯಾಪ್ ಮಾಡಿ ಕೊಲೆಗೈಯಲು ಯತ್ನಿಸಿ ಮಾರ್ಗ ಮಧ್ಯೆ ಗಾಡಿ ಕೆಟ್ಟ ಪರಿಣಾಮ ಪೊಲೀಸರಿಗೆ ಲಾಕ್ ಆದ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಕಳೆದ ಐದು ವರ್ಷಗಳ ಹಿಂದೆ ಕಡೂರಿನಲ್ಲಿ ವಾಸಿಸುತ್ತಿದ್ದ ರಾಜಸ್ಥಾನದ ಕುಠಾಣಿ ಮೂಲದ ಮಂಜುಳಾಳನ್ನು ಮೋಹನ್ ರಾಮ್ ಎಂಬುವನು ಕಳೆದ ವರ್ಷ ಜೋಧ್‌ಪುರ್‌ನಲ್ಲಿ ಪ್ರೀತಿಸಿ ಮದುವೆಯಾಗಿದ್ದನು. ಮದುವೆ ಬಳಿಕ ಮೋಹನ್‌ ರಾಮ್ ತನ್ನ ಪತ್ನಿತನ್ನ ಕಡೂರಿಗೆ ಕರೆದುಕೊಂಡು ಬಂದುಸಂಸಾರ ನಡೆಸುತ್ತಿದ್ದನು. ಕಡೂರಿಗೆ ಬಂದ 2 ತಿಂಗಳ ನಂತರ ರಾಜಸ್ಥಾನಕ್ಕೆ ಹೋಗಿದ್ದ ಹೆಂಡತಿಯನ್ನ ಕಡೂರಿಗೆ ಕರೆದುಕೊಂಡು ಬರಲು ಹೋಗಿದ್ದ ಪತಿ ಮೋಹನ್ ರಾಮ್ ಜೊತೆ ಮಂಜುಳಾ ಬರಲಿಲ್ಲ. ಕಡೂರಿಗೆ ಬರಲು ಆಕೆ ಒಪ್ಪದ ಹಿನ್ನೆಲೆ ಬೇಸತ್ತು ಮೋಹನ್ ಸುಮ್ಮನಾಗಿದ್ದನು. ಹೆಂಡತಿಯ ಮೇಲಿನ ಪ್ರೀತಿಯಿಂದ ಮೋಹನ್ ಆಗಾಗ್ಗೆ ಅವಳ ಮೊಬೈಲ್‌ಗೆ ಮೆಸೇಜ್ ಮಾಡಿದರೂ ಆಕೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಕಳೆದ ತಿಂಗಳು ಮತ್ತೆ ಆಕೆಯನ್ನ ಮಾತನಾಡಿಸಿ, ಬುದ್ಧಿ ಹೇಳಿ ಕರೆದುಕೊಂಡು ಬರಲು ಹೋಗಿದ್ದ ಮೋಹನ್ ಗೆ ಆಕೆ ಹರಿಯಾಣದ ಪಿಪ್ಲಿವಾಲ ಗ್ರಾಮದ ಓಂ.ಪ್ರಕಾಶ್ ಜೊತೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಮೋಹನ್ ತನ್ನ ಪತ್ನಿಗೆ ಮೆಸೇಜ್ ಮಾಡುತ್ತಿರುವ ವಿಷಯ ತಿಳಿದ ಎರಡನೇ ಪತಿ ಓಂ ಪ್ರಕಾಶ್ ಮೊದಲ ಪತಿ ಮೋಹನ್ ನನ್ನ ಮುಗಿಸಲು ಸಂಚು ರೂಪಿಸಿದ್ದ. ಏಳು ಜನರ ತಂಡದೊಂದಿಗೆ ಆ.28ರ ಭಾನುವಾರ ರಾತ್ರಿ ಕಡೂರಿಗೆ ಬಂದ ಓಂ ಪ್ರಕಾಶ್ ಸಿಪಿಸಿ ಕಾಲೋನಿಯಲ್ಲಿರುವ ದಿನಸಿ ಅಂಗಡಿಯಲ್ಲಿದ್ದ ಮೋಹನ್‌ ರಾಮ್‌ನನ್ನು ಸಿನಿಮಿಯ ಶೈಲೆಯಲ್ಲಿ ಅಪಹರಿಸಿ ಆತನ ಬಾಯಿಗೆ ಬಟ್ಟೆ ಕಟ್ಟಿ ಥಳಿಸಿ, ಕಾರಿನಲ್ಲಿಯೇ ಕೊಲೆಗೆ ಸಂಚು ನಡೆಸಿದ್ದಾರೆ.

ಕಾರಿನಲ್ಲಿ ಅಪಹರಿಸಿಕೊಂಡು ಹೋಗುತ್ತಿದ್ದ ದೃಶ್ಯವನ್ನು ಸ್ಥಳೀಯರು ಗಮನಿಸಿದ ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಕಡೂರು ಪೊಲೀಸರು ಹಂತಕರ ಕಾರನ್ನ ಚೇಸ್ ಮಾಡಿಕೊಂಡು ಹೋಗುವಾಗ ಕಡೂರು ತಾಲೂಕಿನ ಮತಿಘಟ್ಟ ಬಳಿ ಹಂತಕರ ಕಾರು ಕೈಕೊಟ್ಟ ಪರಿಣಾಮ ಎಂಟು ಜನ ಹಂತಕರು ಪೊಲೀಸರ ಅತಿಥಿಯಾಗಿದ್ದಾರೆ. ಸಾವಿನ ದವಡೆಯಲ್ಲಿದ್ದ ಮೋಹನ್ ರಾಮ್ ಅದೃಷ್ಟವಶಾತ್ ಪಾರಾಗಿದ್ದಾರೆ. ಸಿನಿಮಿಯ ರೀತಿ ಗಾಡಿಯನ್ನ ಚೇಸ್ ಮಾಡಿದ ಪೊಲೀಸರು ಬೆಂಗಳೂರು
ಮೂಲದ ಆರೋಪಿ 2ನೇ ಪತಿ ಓಂ. ಪ್ರಕಾಶ್, ಶೈಲೇಂದ್ರ, ಪ್ರದೀಪ್, ದಲ್ಲಾರಾಮ್, ಜಿತೇಂದ್ರ, ಶಂಕರ್ ಪಾಟೀಲ್ ಹಾಗೂ ದಿನೇಶ್ ಎಂಬ ಆರೋಪಿಗಳ ಜೊತೆ ಕೊಲೆಗೈಯಲು ಬಳಸಿದ್ದ ವಿಕೇಟ್‌ ಹಾಗೂ ಕಾರನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳನ್ನ
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಈ ಕಾರ್ಯಾಚರಣೆಯಲ್ಲಿ ಸಿಪಿಐ ಶಿವುಕುಮಾರ್, ಪಿ.ಎಸ್.ಐ.ಎನ್.ಕೆ. ರಮ್ಯಾ, ಹರೀಶ್, ಸಿಬ್ಬಂದಿಗಳಾದ ಕೃಷ್ಣಮೂರ್ತಿ, ರಾಜಪ್ಪ, ರಮೇಶ್, ಕುಚೇಲ, ಚಂದ್ರಶೇಖರ್ ಹಾಗೂ ಓಂಕಾರ್ ಮತ್ತಿತರಿದ್ದರು ಪಾಲ್ಗೊಂಡಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!