April 29, 2024

MALNAD TV

HEART OF COFFEE CITY

ಉಡುಪಿ ಚಿಕ್ಕಮಗಳೂರು ಲೋಕಸಭಾ ಟಿಕೆಟ್ : ಶೋಭಾ ಪರ ಯಡಿಯೂರಪ್ಪ ಬ್ಯಾಟಿಂಗ್

1 min read

 

ಗೋ ಬ್ಯಾಕ್ ಶೋಭಾ ಅಭಿಯಾನ ಯಾರು ಮಾಡಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದಿರುವ ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಈ ಬಾರಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಶೋಭಾ ಕರಂದ್ಲಾಜೆಗೆ ಫಿಕ್ಸ್ ಎಂದಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಫೈಟ್ ಬೆನ್ನಲ್ಲೇ ಮಾಜಿ ಸಿ.ಎಂ ಯಡಿಯೂರಪ್ಪ ಶೋಭಾ ಕರಂದ್ಲಾಜೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಗೋ ಬ್ಯಾಕ್ ಶೋಭಾ ಅಭಿಯಾನ ಒಂದು ವ್ಯವಸ್ಥಿತವಾದ ಪಿತೂರಿ ಷಡ್ಯಂತ್ರವಾಗಿದ್ದು, ಯಾರು ಮಾಡಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ. ಇದಕ್ಕಾಗಿ ಶೋಭಾ ಕರಂದ್ಲಾಜೆ ದೃತಿಗೆಡುವ ಅವಶ್ಯಕತೆ ಇಲ್ಲ ಎಂದು ಯಡಿಯೂರಪ್ಪ ಧೈರ್ಯ ಹೇಳಿದ್ದಾರೆ. ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಶೋಭಾ ಗೆಲ್ಲುತ್ತಾರೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟಾಗಿರುವ ಕ್ಷೇತ್ರಗಳಲ್ಲಿ ಗೊಂದಲ ಬಗೆಹರಿಸಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಯಡಿಯೂರಪ್ಪ ಹೇಳಿದರು.

ಕಳೆದ ಬಾರಿ ಮೂರೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದು ಈ ಬಾರಿ ಅದಕ್ಕಿಂತ ಹೆಚ್ಚು ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ ಎಂದು ಅವರು ಹೇಳಿದ್ದಾರೆ . ಮೋದಿ ಕಾರಣಕ್ಕೆ ದೇಶದಲ್ಲಿ ಬಿಜೆಪಿ ಪರ ಅಲೆ ಇದ್ದು ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!