May 3, 2024

MALNAD TV

HEART OF COFFEE CITY

9ನೇ ಯೋಗ ದಿನಾಚರಣೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

1 min read

 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿಶ್ವ ಯೋಗ ದಿನಾಚರಣೆ ಸಮಿತಿಯಿಂದ ಯೋಗ ದಿನಾಚರಣೆ ಆಚರಿಸಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೇರಿದಂತೆ ನೂರಾರು ಜನ ಭಾಗವಹಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ 800ಕ್ಕೂ ಅಧಿಕ ಜನ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಒಂದೂವರೆ ಗಂಟೆ ನಡೆದ ಯೋಗ ದಿನಾಚರಣೆಯಲ್ಲಿ ಹತ್ತಾರು ಯೋಗ ಭಂಗಿಗಗಳನ್ನ ಮಾಡಿದರು.‌ ಪ್ರಧಾನಿ ಮೋದಿಯವರ ಯೋಗದ ಬಗೆಗಿನ ಭಾಷಣವನ್ನ ಎಲ್.ಇ.ಡಿ.ಸ್ಕ್ರೀನ್ ಮೂಲಕ ಯೋಗ ಮಹತ್ವವನ್ನ ಪ್ರಸಾರ ಮಾಡಲಾಯಿತು. ಇದೇ ವೇಳೆ ವೇದಿಕೆ ಕಾರ್ಯಕ್ರಮ ಕೂಡ ನಡೆದಿದ್ದು, ನಿತ್ಯ ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರಲಿದೆ ಎಂದು ಯೋಗದ ಮಹತ್ವವನ್ನ ಯೋಗದಲ್ಲಿ ಪಾಲ್ಗೊಂಡವರೆಗೆ ತಿಳಿಸಿದರು.‌

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!