May 10, 2024

MALNAD TV

HEART OF COFFEE CITY

ಅಕ್ಕಿ ರಾಜಕೀಯ, ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

1 min read

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ. ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನ ಘೋಷಿಸುವಾಗ ನಿಮ್ಮ ತಲೆಯಲ್ಲಿ ಏನಿತ್ತು. ಮೆದುಳು ಇರಲಿಲ್ಲವಾ. ಸಗಣಿ ತುಂಬಿತ್ತ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ಮೋದಿ ಅಕ್ಕಿ ಸೇರಿ ನೀವು 10 ಕೆ.ಜಿ. ಅಕ್ಕಿ ಕೊಡೋದಲ್ಲ. ಕೇಂದ್ರ ಸರ್ಕಾರದ 5 ಕೆ.ಜಿ. ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆ.ಜಿ.ಅಕ್ಕಿ ಕೊಡಿ. ಅಂದರೆ, ಒಬ್ಬರಿಗೆ ತಲಾ15 ಕೆ.ಜಿ.ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ.‌ ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ಸಿಗರಿಗೆ ಮಾನ -ಮರ್ಯಾದೆ ಇಲ್ಲ.‌ ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ.ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ.ಚುನಾವಣೆಯನ್ನ ಗೆಲ್ಲುವುದಕ್ಕೆ ಇಲ್ಲ-ಸಲ್ಲದ ಭರವಸೆ-ಆಸೆ ತೋರಿಸಿದ್ದರು.‌ ಮಹಿಳೆಯರ ಬಸ್ಸಿಗೆ ಪಾಸ್ ಕೇಳುತ್ತಿದ್ದಾರೆ, ಸರ್ಟಿಫಿಕೇಟ್ ಕೇಳ್ತಿದ್ದಾರೆ.‌ ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸರ್ಟಿಫಿಕೇಟ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಕ್ಕಿ ಕೊಡೋದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಈಗ ಯಾಕೆ ನೀವು ಮೋದಿ ಕಡೆ ಬೆರಳು ತೋರಿಸುತ್ತೀರಾ.‌ ಯಾವುದೇ ಮುಂದಾಲೋಚನೆ ಇಲ್ಲದೆ ಘೋಷಿಸಿ ಇವತ್ತು ಮೋದಿ ಕಡೆ ತೋರಿಸುತ್ತಿದ್ದೀರಾ. ನಾವು ಅಂದೇ ಕೇಳಿದ್ದೇವು ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು.‌ ಅಂದು ಸುಮ್ಮನಿದ್ದು ಇಂದು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಾ ಎಂದು ಆಕ್ರೋಶ ಹೊರಹಾಕಿದ್ದಾರೆ. ಎಲ್ಲದಕ್ಕೂ ಮೋದಿ ತೋರಿಸುವುದಾದರೆ, ಅಂದು ನೀವು ಗ್ಯಾರಂಟಿ ಕಾರ್ಡ್ ಏಕೆ ಹಂಚುದ್ರಿ, ಯಾರಿಗೆ ಮೋಸ ಮಾಡಿ, ಯಾರ ಮೂಗಿಗೆ ತುಪ್ಪ ಸವರಲು ಹಂಚುದ್ರಿ ಎಂದು ಕಿಡಿ ಕಾರಿದ್ದಾರೆ. ಬಫರ್ ಸ್ಟಾಕ್‌ ಇರೋದು ನೆರೆ, ಬರ, ಯುದ್ಧದ ಸಂದರ್ಭದಲ್ಲಿ ಜನರ ಬಳಕೆಗೆ. ನಿಮಗೆ ಅಕ್ಕಿ ಬೇಕಾದರೆ ಬೇರೆ ರಾಜ್ಯದಲ್ಲಿ ಖರೀದಿಸಿ, ನಮ್ಮ ರಾಜ್ಯದ ರೈತರೇ ಅಕ್ಕಿಯನ್ನು ಮಾರುತ್ತಾರೆ. ಅವರ ಬಳಿ ಖರೀದಿಸಿ ಎಂದು ಸಲಹೆ ನೀಡಿದ್ದಾರೆ.‌

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!