May 2, 2024

MALNAD TV

HEART OF COFFEE CITY

ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ಪರಿಶೀಲನೆ

1 min read

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆಯ ಅಬ್ಬರ ಕೊಂಚಮಟ್ಟಿಗೆ ತಗ್ಗಿದ್ದು ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲೇ ಹಿರಿಯುತ್ತಿದ್ದು, ಹಳ್ಳಕೊಳ್ಳಗಳಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದೆ.
ಮೂಡಿಗೆರೆ, ಕಳಸ, ಕೊಟ್ಟಿಗೆಹಾರ ಕುದುರೆಮುಖ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಸುತ್ತಮುತ್ತ ಮಂಗಳವಾರ ಬೆಳಿಗ್ಗೆ ಮಳೆ ಕೊಂಚ ಬಿಡುವು ನೀಡಿದ್ದು ಸಂಜೆಯಾಗುತ್ತಿದ್ದoತೆ ಮಳೆಯಾಗುತ್ತಿದೆ. ಕೆಲವೆಡೆಗಳಲ್ಲಿ ಮರ ಮತ್ತು ವಿದ್ಯುತ್ ಕಂಬಗಳ ಧರೆಗುರುಳಿವೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದ ಹಳ್ಳದಾಟಲು ಗ್ರಾಮಸ್ಥರು ಪರದಾಡುತ್ತಿದ್ದಾರೆ.
ತಾಲ್ಲೂಕಿನ ಆವತಿ ಹೋಬಳಿ ಕಲ್ಲಳ್ಳಿಯಲ್ಲಿ ಹಳ್ಳ ಉಕ್ಕಿ ಹರಿಯುತ್ತಿದ್ದು ಜನರು ಒಂದು ಬದಿ ಯಿಂದ ಮತ್ತೊಂದು ಬದಿಗೆ ದಾಡಲು ಹರಸಾಹಸ ಪಡುತ್ತಿದ್ದಾರೆ. ಕಲ್ಲಳ್ಳಿ, ಬೆರಣ ಗೋಡು, ಬಸರವಳ್ಳಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿ ಗಳು ಓಟು ಕೇಳಲು ಬರುತ್ತಾರೆ ನಮ್ಮ ಸಮಸ್ಯೆಗಳನ್ನು ಆಲಿಸುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಭೂಕುಸಿತ ಉಂಟಾಗಿರುವುದರಿoದ ಕೆರೆಮಕ್ಕಿ ಮತ್ತು ಜೋಳದಾಳ್ ಸಂಪರ್ಕ ಕಡಿತಗೊಂಡಿ ದೆ. ಬಾರೀ ಗಾಳಿ ಮಳೆಗೆ ತೋಟಗಳಲ್ಲಿನ ಮರಗಳು ಉರುಳಿ ಬಿದ್ದಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಾರ್ಮಿಕರು ಕೆಲಸಕ್ಕೆ ತೆರಳಲು ಸಾಧ್ಯ ವಾಗದೆ ಮನೆಯಲ್ಲೇ ಕುಳಿತು ಕಾಲ ಕಳೆಯುವಂತಾಗಿದೆ.
ನಿರAತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲೇ ಹರಿಯುತ್ತಿವೆ. ಹಳ್ಳಕೊಳ್ಳ ಗಳು ತುಂಬಿ ಹರಿಯುತ್ತಿದ್ದು ಭಾರೀ ಮಳೆಗೆ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ.
ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಮನೆಗಳು ಕುಸಿದಿವೆ. ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ವ್ಯತ್ಯಾಯಗೊಂಡಿದೆ. ರಸ್ತೆಗಳ ಹಾನಿಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ಒಟ್ಟಾರೆ ಬಾರೀ ಮಳೆಗೆ ಜನರು ತತ್ತರಿಸಿದ್ದಾರೆ.

ಮಳೆ ತಗ್ಗಲು ದೇವರ ಮೊರೆ:

 

‘ಕಳೆದೊಂದು ವಾರದಿಂದ ಜಿಲ್ಲಾದ್ಯಂತ ಬಾರೀ ಪ್ರಮಾಣದ ಮಳೆಯಾಗುತ್ತಿದ್ದು, ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಮಳೆ ಅಬ್ಬರ ತಗ್ಗಿಸುವಂತೆ ಜಿಲ್ಲೆಯ ಜನತೆ ದೇವರ ಮೊರೆ ಹೋಗಿದ್ದಾರೆ.
ಮಳೆ ದೇವರು ಎಂದು ಪ್ರಸಿದ್ಧಿ ಪಡೆದಿರುವ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಋಷ್ಯ ಶೃಂಗೇಶ್ವರ ದೇವಾಲಯದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾ ಜ್ ಅವರು ಸೇರಿದಂತೆ ಅನೇಕರು ಶೃಂಗೇರಿ ಶಾರದಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಅವರ ದರ್ಶನ ಪಡೆದು ಪ್ರಾರ್ಥಿಸಿದರು.’

ಕೋಡಿಬಿದ್ದ ಅಯ್ಯನಕೆರೆ:

 

 

ಕಡೂರು ತಾಲ್ಲೂಕು ಸಖರಾಯಪಟ್ಟಣ ಸಮೀಪದಲ್ಲಿರುವ ಇತಿಹಾಸ ಪ್ರಸಿದ್ಧ ಅಯ್ಯನ ಕೆರೆ ಕೋಡಿ ಬಿದ್ದಿದೆ. ಮಂಗಳವಾರ ಬೆಳಿಗ್ಗೆ ೭ಗಂಟೆಗೆ ಕೋಡಿ ಬಿದ್ದಿದ್ದು, ರೈತರ ಮೊಗ ದಲ್ಲಿ ಮಂದಹಾಸ ಮೂಡಿಸಿದೆ.

ಮಹಾಮಳೆಗೆ ಮೂರನೇ ಬಲಿ:

ಚಿಕ್ಕಮಗಳುರು ತಾಲ್ಲೂಕಿನ ಹೊಸಪೇಟೆಯ ತೋಟದಹಳ್ಳದಲ್ಲಿ ಕೊಚ್ಚಿಹೋಗಿದ್ದ ೧ನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಪತ್ತೆಕಾರ್ಯ ೯ನೇ ದಿನಕ್ಕೆ ಕಾಲಿಟ್ಟಿದೆ. ಬಾಲಕಿ ಸುಳಿವು ಸಿಕ್ಕಿಲ್ಲ. ಎಸ್‌ಡಿಆರ್‌ಎಫ್, ಅಗ್ನಿಶಾಮಕದಳ, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡಗಳು ಹಾಗೂ ಸ್ಥಳೀಯವರು ಶೋಧಕಾರ್ಯವನ್ನು ಮುಂದುವರೆಸಿ ದ್ದಾರೆ. ಕಾಫಿತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹರಪನಹಳ್ಳಿ ಮೂಲಕ ಯು ವತಿ ಪ್ರೀಯಾಂಕ ಮರಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ಉಂಡೇ ದಾಸರಹಳ್ಳಿ ಸಮೀಪ ಹರಿಯುವ ಹಳ್ಳದಲ್ಲಿ ಚಿಂದಿ ಆಯಾಲು ಹೋದ ೪೦ವರ್ಷದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆಂದು ಶಂಕಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸೇರಿದಂತೆ ಅಧಿಕಾರಿಗಳ ತಂಡ ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!