May 5, 2024

MALNAD TV

HEART OF COFFEE CITY

ದಾಖಲೆ ಇಲ್ಲದ 6 ಕೋಟಿ 44 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಸೀಜ್

1 min read

 

ಚಿಕ್ಕಮಗಳೂರು. ದಾಖಲೆ ಇಲ್ಲದ ಸುಮಾರು 6 ಕೋಟಿ 44, ಮೌಲ್ಯದ ಚಿನ್ನ ಹಾಗೂ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.‌ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಜಿಲ್ಲೆಯಲ್ಲಿ ವಿವಿಧ ಜಿಲ್ಲೆಗಳ ಗಡಿ ಹಂಚಿಕೊಂಡಿರುವ 18 ಕಡೆಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಚೆಕ್ ಪೋಸ್ಟ್ ಗಳನ್ನ ನಿರ್ಮಿಸಿದ್ದಾರೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಗಡಿ ಹಂಚಿಕೊಂಡಿರುವ ತರೀಕೆರೆ ತಾಲೂಕಿನ ಮಳಲಿ ಚನ್ನೇನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಹೋಗುತ್ತಿದ್ದ ಫುಲ್ ಕವರ್ ಮಾಡಿದ್ದ ಟಾಟಾ ಏಸ್ ಆಟೋವನ್ನ ಪೊಲೀಸರು ತಪಾಸಣೆ ನಡೆಸುವ ವೇಳೆ ವಾಹನದಲ್ಲಿ ಸುಮಾರು 6 ಕೋಟಿ 44 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಇರುವುದು ಪತ್ತೆಯಾಗಿದೆ. ಪೊಲೀಸರು ವಾಹನವನ್ನ ಸೀಜ್ ಮಾಡಿದ್ದು ಸೂಕ್ತ ದಾಖಲೆ ಒದಗಿಸುವಂತೆ ಸೂಚಿಸಿದ್ದಾರೆ. ಟಾಟಾ ಏಸ್ ವಾಹನ ಸಂಪೂರ್ಣ ಸೀಲ್ ಆಗಿದ್ದು ಪೊಲೀಸರು ವಾಹನವನ್ನ ಓಪನ್ ಮಾಡಿಲ್ಲ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಂದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ವಾಹನವನ್ನು ಓಪನ್ ಮಾಡಲಿದ್ದಾರೆ.

ಕಳೆದೊಂದು ವಾರದ ಹಿಂದಷ್ಟೇ ಇದೇ ಚೆಕ್ ಪೋಸ್ಟ್ ನಲ್ಲಿ ಸುಮಾರು 2.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ವಶಪಡಿಸಿಕೊಂಡಿದ್ದರು. ಜಿಲ್ಲಾಧ್ಯಂತ 18 ಚೆಕ್ ಪೋಸ್ಟ್ ಗಳಿದ್ದು ಎಲ್ಲಾ ಕಡೆಯೂ ಪೊಲೀಸರು ಹಗಲಿರುಳು ಹದ್ದಿನ ಕಣ್ಣಿಟ್ಟು ಚುನಾವಣೆಯ ಅಕ್ರಮಗಳನ್ನು ತಡೆಯಲು ಕಾಯುತ್ತಿದ್ದಾರೆ. ಕಳೆದ 11 ದಿನದಲ್ಲಿ ಜಿಲ್ಲೆಯಲ್ಲಿ ಸುಮಾರು 9 ಕೋಟಿಗೂ ಅಧಿಕ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ ಚಿನ್ನ, ಬೆಳ್ಳಿ, ಮದ್ಯ, ಕುಕ್ಕರ್, ಸೀರೆ ಫ್ಯಾನ್ ಸೇರಿದಂತೆ ವಿವಿಧ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!