May 18, 2024

MALNAD TV

HEART OF COFFEE CITY

ಮಲೆನಾಡಲ್ಲಿ ನಿಲ್ಲದ ಹುಲಿ ಹಾವಳಿ, ಆರು ತಿಂಗಳಲ್ಲಿ 50ಕ್ಕೂ ಹೆಚ್ಚು ರಾಸುಗಳು ಬಲಿ

1 min read

ಚಿಕ್ಕಮಗಳೂರು.ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ ಹಾವಳಿ ಮುಂದುವರೆದಿದ್ದು ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದ್ದು, ಹಸು ಸಾಕಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಆತಂಕಕ್ಕೀಡಾಗಿದೆ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಿಂದ ಹುಲಿ ದಾಳಿ ನಿರಂತರವಾಗಿದೆ. ಮೇವಿಗೆ ಹೋದ ರಾಸುಗಳು ಮನೆಗೆ ಬಂದಾಗಲೇ ವಾಪಸ್ ಬಂದಿವೆ ಎಂಬ ಗ್ಯಾರಂಟಿಯಾಗುವುದು. ಈ ರೀತಿಯ ಪರಿಸ್ಥಿತಿ ಮಲೆನಾಡಲ್ಲಿ ನಿರ್ಮಾಣವಾಗಿದೆ. ಕಳೆದ ಆರು ತಿಂಗಳಲ್ಲಿ ಹುಲಿ ದಾಳಿ ನಿರಂತರವಾಗಿದ್ದು, ಸರಿಸುಮಾರು 50ಕ್ಕೂ ಹೆಚ್ಚು ರಾಸುಗಳು ಹುಲಿ ದಾಳಿಗೆ ಸಾವನ್ನಪ್ಪಿವೆ. ಇಂದೂ ಕೂಡ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದಲ್ಲಿ ಹುಲಿ ದಾಳಿಗೆ ಸಿಂದಿ ಹಸು ಬಲಿಯಾಗಿದೆ. ಮತ್ತಿಕಟ್ಟೆಯ ಬ್ಲೂ ಮೌಂಟ್ ಎಸ್ಟೇಟ್ ಆನಂದ್ ಮಿಸ್ಕಿತ್ ಅವರ ಕಾಫಿ ತೋಟದಲ್ಲಿ ಮಧುಸೂದನ್ ಎಂಬುವರ ಸಿಂದಿ ಹಸು ಹುಲಿ ಬಾಯಿಗೆ ತುತ್ತಾಗಿದೆ. ಬಣಕಲ್ ಸುತ್ತಮುತ್ತಲಿನ ಹೆಗ್ಗುಡ್ಲು, ಮತ್ತಿಕಟ್ಟೆ, ಬಿ.ಹೊಸಳ್ಳಿ, ಹೊಕ್ಕಳ್ಳಿ, ಭಾರತೀಬೈಲ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಹುಲಿ ದಾಳಿ ನಿರಂತರವಾಗಿವೆ. ಆದರೂ, ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಲವು ಬಾರಿ ಹುಲಿ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಹುಲಿ ಸೆರೆಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಕಿದ್ದರೂ ಹುಲಿಯನ್ನ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ. ಹುಲಿ ದಾಳಿಯಿಂದ ನಿರಂತರವಾಗಿ ರಾಸುಗಳನ್ನ ಕಳೆದುಕೊಳ್ಳುತ್ತಿರುವ ಮಲೆನಾಡಿಗರು ಕೂಡಲೇ ಹುಲಿಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಹುಲಿ ಸ್ಥಳಾಂತರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅಧಿಕೃತ ಆದೇಶ ಬಂದ ಕೂಡಲೇ ಹುಲಿಯನ್ನ ಸ್ಥಳಾಂತರಿಸುತ್ತೇವೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ಗಸ್ತು ಅಧಿಕಾರಿ ಜಯಪ್ಪ, ಮೋಸಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!