May 18, 2024

MALNAD TV

HEART OF COFFEE CITY

ಗೊಂಬೆಗಳ ಮೂಲಕ ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವದ ಅನಾವರಣ

1 min read

ಚಿಕ್ಕಮಗಳೂರು : ಶರನ್ನವರಾತ್ರಿ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಪುರೋಹಿತ ಅಶ್ವಥ್ಥನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ.

ಯಧುವಂಶಸ್ಥರ ಪರಂಪರೆಯ ಕೆಂಪು ಚಂದನದ ಮರದಲ್ಲಿ ಕೆತ್ತಲಾದ ಪಟ್ಟದ ಗೊಂಬೆ ಗಳು, ಮೈಸೂರು ಮಹಾರಾಜರ ದಸರಾ ದರ್ಬಾರ್, ಜಂಬೂಸವಾರಿ, ಅರಮನೆ, ಅರಸರ ಸಾಂಪ್ರದಾಯಿಕ ಆಚರಣೆಗಳ ವೈಭವವನ್ನು ಸಾರುತ್ತಿವೆ, ಭಾರತೀಯ ಹಬ್ಬ ಹರಿದಿನಗಳ ಆಚರಣೆ ಗಳನ್ನು ಸಂಪ್ರದಾಯಗಳನ್ನು ತೆರೆದಿಡುವ ನೂರಾರು ಗೊಂಬೆಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುತ್ತಿವೆ.

ಪದ್ಮಾವತಿ ಹಾಗೂ ಶ್ರೀನಿವಾಸನ ವಿವಾಹದ ವೈಭವವನ್ನು ಸಾರುವ ಶ್ರೀನಿವಾಸ ಕಲ್ಯಾಣದ ಗೊಂಬೆಗಳು ನೋಡುಗರ ಗಮನ ಸೆಳೆಯುತ್ತಿವೆ, ವರನ ದಿಬ್ಬಣವನ್ನು ಎದುರುಗೊಳ್ಳುವುದು, ವರ ಪೂಜೆ, ಮಾಂಗಲ್ಯ ಧಾರಣೆ, ಲಾಜಾ ಹೋಮ, ಸಪ್ತಪದಿ ತುಳಿಯುವುದು ಸೇರಿದಂತೆ ಮದುವೆಯ ವಿವಿಧ ಆಚರಣೆಗಳ ದೃಶ್ಯಗಳು ಕಣ್ಮನ ತಣಿಸುತ್ತಿವೆ. ಕೃಷಿ ಚಟುವಟಿಕೆ, ಸಂತೆಯ ದೃಶ್ಯಗಳು, ಭಾರತೀಯ ಹಬ್ಬ, ಹರಿದಿನಗಳ ವಿವಿಧ ಆಚರಣೆಗಳನ್ನು ತೆರೆದಿಡುವ ನೂರಾರು ಗೊಂಬೆಗಳು ಮನಸ್ಸಿಗೆ ಮುದ ನೀಡುತ್ತಿವೆ, ಗೋಪಾಲಕರನ್ನು ರಕ್ಷಿಸಲು ಗೋಪಾಲಕೃಷ್ಣ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದ ದೃಶ್ಯ, ಮಹಾವಿಷ್ಣುವಿನ ದಶಾವತಾರದ ಚಿತ್ರಣ, ಕೈಲಾಸ ಪರ್ವತ ಮನಸೆಳೆಯುತ್ತಿವೆ.

ಪಟ್ಟದ ಗೊಂಬೆಗಳ ಕುರಿತು ವಿವರಿಸಿದ ಅನುರಾಧಾ ಜೋಶಿ, ತಮ್ಮ ತವರು ಮನೆಯ ನವರಾತ್ರಿ ಹಬ್ಬದ ಸಂಪ್ರದಾಯವನ್ನು ತಾವು ಮನೆಯವರ ಪ್ರೋತ್ಸಾಹ ಮತ್ತು ಸಹಕಾರ ದಿಂದಾಗಿ ಮುಂದೂವರೆಸಿಕೊಂಡು ಬರುತ್ತಿದ್ದು, ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಉಳಿಸುವ ಸೆಣ್ಣ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು .ಮಹಿಳೆಯರು ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಹಬ್ಬಗಳನ್ನು ತಪ್ಪದೇ ಆಚರಿಸಿದರೆ ಮಾತ್ರ ಅವು ಮುಂದಿನ ತಲೆಮಾರಿಗೆ ಉಳಿಯಲು ಸಾಧ್ಯವಾಗುತ್ತದೆ ಎಂದರು.


ಪುರೋಹಿತ ಅಶ್ವಥ್ಥನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಮಾತನಾಡಿ, ಆಧು ನಿಕತೆಯ ಭರದಲ್ಲಿ ನಮ್ಮ ಮಕ್ಕಳು ಮತ್ತು ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರ, ಆಚರಣೆಗಳನ್ನು ಮರೆಯುತ್ತಿದ್ದಾರೆ ಹಾಗಾಗಿ ಅವುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಪಟ್ಟದ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಹೇಳಿದರು. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!