May 7, 2024

MALNAD TV

HEART OF COFFEE CITY

ನಗರಸಭೆ ಅಧ್ಯಕ್ಷರಾಗಿ ವರಸಿದ್ಧಿ ವೇಣುಗೋಪಾಲ್ ಬಹುತೇಕ ಖಚಿತ

1 min read

 

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಚುನಾವಣೆ ಜ.21ರ ಶುಕ್ರವಾರ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಗುರುವಾರ ಸಂಜೆ ನಗರದ ಬಿಜೆಪಿ ಕಚೇರಿಯಲ್ಲಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ಉಮಾದೇವಿ ಕೃಷ್ಣಪ್ಪ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ `ಎ’ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ `ಬಿ’ಗೆ ಮೀಸಲಾಗಿದೆ. ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಳ ಬಹುಮತವನ್ನು ಪಡೆದಿದ್ದು, ಶುಕ್ರವಾರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು ಕೋರ್ ಕಮಿಟಿ ಸಭೆಯಲ್ಲಿ ಇಬ್ಬರ ಆಯ್ಕೆ ಬುಹುತೇಕ ಖಚಿತವಾಗಿದ್ದು ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ

 

 

ಚುನಾವಣೆ ಪ್ರಕ್ರಿಯೆ ಶುಕ್ರವಾರ ಮಧ್ಯಾಹ್ನ 1ಗಂಟೆಗೆ ಆರಂಭವಾಗಲಿದ್ದು, ಬೆಳಿಗ್ಗೆ 9ಗಂಟೆ ಯಿಂದ 11 ಗಂಟೆವರೆಗೂ ನಾಮಪತ್ರ ಸ್ವೀಕರಿಸಲು ಸಮಯ ನಿಗಧಿ ಮಾಡಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!