May 6, 2024

MALNAD TV

HEART OF COFFEE CITY

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ವಿಜಯ ಕುಮಾರ್

1 min read

ಚಿಕ್ಕಮಗಳೂರು: ರಾಜ್ಯ ಸರ್ಕಾರ ರೈತರು ಮತ್ತು ಜನಸಾಮಾನ್ಯರಿಗೆ ಅನ್ಯಾಯ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕೃಷಿ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿದ್ದ ನಾಲ್ಕು ಸಾವಿರ ರೂ. ನಿಲ್ಲಿಸಿದೆ. ಕೃಷಿ ಪಂಪ್‍ಸೆಟ್, ಲೈನ್, ಟಿಸಿ ಅಳವಡಿಕೆ ಈ ಹಿಂದೆ ಉಚಿತವಾಗಿ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಏಕಾಏಕಿ ದುಪ್ಪಟ್ಟು ಹಣ ಪಾವತಿಸಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವಂತೆ ಮಾಡಿದ್ದು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ರೈತಾಪಿ ವರ್ಗದವರ ಅನುಕೂಲಕ್ಕಾಗಿ ಹಿಂದಿನ ಸರ್ಕಾರ ಒಂಬತ್ತು ಸಾವಿರ ಕೋಟಿ ರೂ. ಮೀಸಲಿಟ್ಟಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ನಾಲ್ಕು ಸಾವಿರ ಕೋಟಿ ರೂ.ಗೆ ಇಳಿಸಿದೆ ಎಂದು ಆರೋಪಿಸಿದರು.

ದಿನನಿತ್ಯ ಬಳಕೆಯ ಛಾಪಾ ಕಾಗದ ಬೆಲೆ ಶೇ.80ರಷ್ಟು ಏರಿಕೆ ಮಾಡಿದೆ. ಜಮೀನು, ಮನೆ, ಕಂದಾಯ ಶುಲ್ಕ, ವಿದ್ಯುತ್ ಮೀಟರ್ ದರ ಏರಿಕೆ, ಅಬಕಾರಿ ಶುಲ್ಕ, ಹಾಲಿನ ದರ ಏರಿಕೆ ಮಾಡಲಾಗಿದೆ ಜತೆಗೆ ದಿನನಿತ್ಯ ಬಳಕೆ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ವಿನಂತಿಸಿದರು. .

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!