May 10, 2024

MALNAD TV

HEART OF COFFEE CITY

ಬಾಳೆಹೊನ್ನೂರಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಏಕಾಂಗಿ ಪ್ರತಿಭಟನೆ

1 min read

 

 ಎಷ್ಟೇ ಬಾರಿ ಹೇಳಿದರೂ ಒತ್ತುವರಿ ಜಾಗವನ್ನ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯ ಏಕಾಂಗಿಯಾಗಿ ಪ್ರತಿಭಟನೆ ನಡೆಸಿ 36 ಕಿ.ಮೀ. ಏಕಾಂಗಿಯಾಗಿ ಪಾದಯಾತ್ರೆ ನಡೆಸುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಎನ್. ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೇ ನಂ. 136ರಲ್ಲಿ 2.30 ಎಕರೆ ಗೋಮಾಳವನ್ನ ಪ್ರಭಾವಿಯೊಬ್ಬರು ಒತ್ತುವರಿ ಮಾಡಿ ಕೃಷಿ ಮಾಡುತ್ತಿದ್ದಾರೆ. ಈ ಬಗ್ಗೆ ಎನ್.ಆರ್.ಪುರ ತಹಶೀಲ್ದಾರ್ ಜಂಟಿ ಸರ್ವೇಗೆ ಸೂಚಿಸಿದ್ದರು.

ಅಧಿಕಾರಿಗಳು ಗೋಮಾಳವೆಂದು ವರದಿ ನೀಡಿದ್ದಾರೆ. ಆದರೆ, ಈವರೆಗೂ ಅಧಿಕಾರಿಗಳು ಒತ್ತುವರಿ ತೆರವು ಮಾಡಿಲ್ಲ. ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಜನ ನಿವೇಶನ ರಹಿತರಿದ್ದು, ಹಲವರಿಗೆ ವಸತಿ ಸೌಲಭ್ಯಗಳಿಲ್ಲ. ಅಧಿಕಾರಿಗಳು ಕೂಡಲೇ ಒತ್ತುವರಿ ಜಾಗವನ್ನ ತೆರವು ಮಾಡಿ ಸರ್ಕಾರಿ ಬಳಕೆಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!