May 19, 2024

MALNAD TV

HEART OF COFFEE CITY

ಮುಳ್ಳಯ್ಯನಗಿರಿಯನ್ನು ತ್ಯಾಜ್ಯದ ರಾಶಿಯಿಂದ ಮುಕ್ತಿಗೊಳಿಸಿದ ಸ್ವಯಂಸೇವಕರು

1 min read

700 ಜನ ಸ್ವಯಂಸೇವಕರಿಂದ ರಾಜ್ಯದ ಅತಿ ಎತ್ತರದ ಪ್ರದೇಶವಾಗಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರವಾಸಿಗರು ಮುಳ್ಳಯ್ಯನಗಿರಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ ವೇಳೆ ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನ ಎಸೆದು ಮಲಿನ ಮಾಡುತ್ತಿರೋದು ಪರಿಸರ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರವಾಸಿಗರು ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಕಸವನ್ನ ಎಸೆದು ಹೋಗ್ತಿರೋದು ಪ್ರವಾಸೋದ್ಯಮ ಇಲಾಖೆಗೂ ತಲೆನೋವಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ 700ಕ್ಕೂ ಹೆಚ್ಚು ಸ್ವಯಂಸೇವಕರು ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ನಗರಸಭೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ನೂರಾರು ಸ್ವಯಂಸೇವಕರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. ಸ್ವಚ್ಛತಾ ಕಾರ್ಯದಲ್ಲಿ ಸುಮಾರು ನಾಲ್ಕು ಲಾರಿ ಲೋಡ್ ನಷ್ಟು ಪ್ಲಾಸ್ಟಿಕ್ ತ್ಯಾಜ್ಯ, ಕಸ ಸಂಗ್ರಹವಾಗಿದೆ. ಇನ್ನು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಎಲ್ಲರಿಗೂ ಗುಲಾಬಿ ಹೂ ನೀಡಿ  ಶ್ಲಾಘಿಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!