May 19, 2024

MALNAD TV

HEART OF COFFEE CITY

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಿ : ಜಿಲ್ಲಾಧಿಕಾರಿ ಕೆ.ಎನ್ ರಮೇಶ್

1 min read

ಚಿಕ್ಕಮಗಳೂರು.ಜು.09: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯಿತಿ ನಜೀರ್ ಸಾಬ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮೂಲಭೂತ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸಲು ಮಾರ್ಗದರ್ಶನ ನೀಡಿದರು. ಪರೀಕ್ಷಾ ಕೆಂದ್ರಕ್ಕೆ ಹೋಗುವ ಮಾರ್ಗ ನಕ್ಷೆ ಸಿದ್ಧಪಡಿಸಬೇಕು ಹಾಗೂ ಆರೋಗ್ಯ ಇಲಾಖೆಯವರು ಪ್ರತಿ ಬ್ಲಾಕಿಗೆ ಒಂದೊಂದು ಅಂಬ್ಯುಲೆನ್ಸ್ ವಾಹನವನ್ನು ಮೀಸಲು ಇಡಬೇಕೆಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಎನ್-95 ಮಾಸ್ಕ್ ಮತ್ತು ಸ್ಯಾನಿಟೈಸರ್. ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಸಿದ್ಧಪಡಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳು ನಿಗದಿತ ವೇಳೆಗೆ ಹಾಜರಾಗಬೇಕು ಮತ್ತು ಹೆಚ್ಚು ಮಕ್ಕಳಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಆರೋಗ್ಯ ಕೌಂಟರ್‍ಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಿಗೆ ವ್ಯಾಕ್ಸೀನೇಷನ್ ಆಗಿರುವ ಬಗ್ಗೆ ಮಾಹಿತಿ ಪಡೆದು ಎಲ್ಲರಿಗೂ ಕನಿಷ್ಟ ಒಂದು ಡೋಸ್ ಆದರೂ ಪಡೆಯಲು ತುರ್ತು ಕ್ರಮವಹಿಸುವಂತೆ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ ಗಮನಹರಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಕ್ಕೂ ಮೊದಲು ಪರೀಕ್ಷಾ ಬರೆಯುವ ಕೊಠಡಿ ವಿವರ ತಿಳಿಯುವಂತೆ ವ್ಯವಸ್ಥೆ ಮಾಡಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ವಹಿಸಬೇಕು ಎಂದರು. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸಿದ ಅವರು, ತುರ್ತು ಮಾಹಿತಿ ರವಾನೆಗಾಗಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ವಾಟ್ಸಾಪ್ ಗ್ರೂಪ್ ರಚಿಸುವಂತೆ ಸಲಹೆ ನೀಡಿದರು. ಪರೀಕ್ಷಾ ದಿನಗಳಂದು ಮಾರ್ಗದ ಎಲ್ಲಾ ಬಸ್‍ಗಳನ್ನು ಚಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದ ಅವರು ಜೊತೆಗೆ ಯಾವ ಮಾರ್ಗಕ್ಕೆ ಸಾರಿಗೆ ವ್ಯವಸ್ಥೆಯ ಅಗತ್ಯವಿದೆ ಎಂಬುದರ ಬಗ್ಗೆ ಕ್ರಿಯಾಯೋಜನೆ ಮಾಡಿ ಸಾರಿಗೆ ಘಟಕಕ್ಕೆ ತುರ್ತಾಗಿ ಸಲ್ಲಿಸುವಂತೆ ತಿಳಿಸಿದರು.

 

 

ಎಸ್.ಎಸ್.ಎಲ್.ಸಿ ಪರೀಕ್ಷೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ ವೈ.ಎಸ್.ವಿ ದತ್ತ

 

 

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!