April 28, 2024

MALNAD TV

HEART OF COFFEE CITY

ಚಾರ್ಮಾಡಿ ಘಾಟಿಯಲ್ಲಿ ನೀರಿನ ಟ್ಯಾಂಕರ್ ಪಲ್ಟಿ, ಸ್ಥಳದಲ್ಲೇ ಓರ್ವ ಸಾವು

1 min read

 

ಚಿಕ್ಕಮಗಳೂರು ನೀರಿನ ಟ್ಯಾಂಕರ್‍ನ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತನನ್ನ ಜಾಖಂಡ್ ಮೂಲದ ದಿಬೋ ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಗೆಂದು ಕಾರ್ಮಿಕರ ಟ್ರ್ಯಾಕ್ಟರ್ ನೀರನ್ನ ತುಂಬಿಸಿಕೊಂಡು ಹೋಗುವಾಗ ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಜಾರ್ಖಂಡ್ ಮೂಲದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟ್ರ್ಯಾಕ್ಟರ್‍ನಲ್ಲಿದ್ದ ಮತ್ತೋರ್ವನಿಗೂ ಗಂಭೀರ ಗಾಯವಾಗಿದೆ. ಗಾಯಾಳುವನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!