May 15, 2024

MALNAD TV

HEART OF COFFEE CITY

ವಾರಾಂತ್ಯದ ಕರ್ಫ್ಯೂ: ತುರ್ತು ಹೊರತು ಪಡಿಸಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ_ಕೆ.ಎನ್ ರಮೇಶ್

1 min read

 

ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ತುರ್ತು ಮತ್ತು ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.

ಅಗತ್ಯ ಮತ್ತು ತುರ್ತು ಕರ್ತವ್ಯ ಮತ್ತು ಸೇವೆಗಳನ್ನು ಸಲ್ಲಿಸಲು ಹಾಗೂ ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣೆ ಕರ್ತವ್ಯ ನಿರ್ವಹಿಸುವ ಎಲ್ಲಾ ಕಾರ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಛೇರಿಗಳು ಮತ್ತು ಅದಕ್ಕೆ ಸಂಬಂಧಿಸಿದ ಸಂಸ್ಥೆಗಳು, ನಿಗಮಗಳು ಇತ್ಯಾಧಿಗಳನ್ನು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ ಮತ್ತು ಈ ಕಛೇರಿಗೆ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಗಳ ಸಂಚಾರಕ್ಕೆ ಅನುಮತಿ ನೀಡಿದ್ದು ಎಲ್ಲಾ ಸಾರ್ವಜನಿಕ ಉದ್ಯಾನವನಗಳನ್ನು ಮುಚ್ಚಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ-ಸಂಸ್ಥೆಗಳು ಸೇರಿದಂತೆ ಎಲ್ಲಾ ಕೈಗಾರಿಕೆಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಮತ್ತು ಈ ಸಂಸೆ, ಘಟಕಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಕಾರ್ಮಿಕರು ಆಯಾ ಸಂಘ ಸಂಸ್ಥೆ ನೀಡುವ ಅಧಿಕೃತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ.
ರೋಗಿಗಳು ಮತ್ತು ಅವರ ಪರಿಚಾರಕರು ತುರ್ತು ಸಂದರ್ಭದಲ್ಲಿ ಮಾತ್ರ ಓಡಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ವ್ಯಾಕ್ಸಿನೇಷನ್ ಪಡೆಯಲು ಇಚ್ಚಿಸುವ ವ್ಯಕ್ತಿಗಳಯ ಅಗತ್ಯ ದಾಖಲೆಗಳನ್ನು ಹಾಜರು ಪಡಿಸಿ ಓಡಾಡಲು ಅವಕಾಶ ನೀಡಲಾಗಿದೆ.
ಅಗತ್ಯ ವಸ್ತುಗಳಾದ ದಿನಸಿ ಅಂಗಡಿಗಳು, ಆಹಾರ ಪದಾರ್ಥಗಳ ಅಂಗಡಿಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸದ ಅಂಗಡಿಗಳು, ಡೈರಿ ಮತ್ತು ಹಾಲಿನ ಬೂತ್‍ಗಳು, ಪಶು ಆಹಾರದ ಅಂಗಡಿಗಳು ಹಾಗೂ ಬೀದಿ ವ್ಯಾಪಾರಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಬರುವುದನ್ನು ನಿಯಂತಿಸುವ ನಿಟ್ಟಿನಲ್ಲಿ 24*7 ಸಮಯಾವಧಿಯಲ್ಲಿ ಎಲ್ಲಾ ರೀತಿಯ ಸಾಮಾಗ್ರಿಗಳನ್ನು/ಪದಾರ್ಥಗಳನ್ನು ಹೋಂ ಡೆಲಿವರಿ ಮೂಲಕ ಸರಬರಾಜು ಮಾಡುವುದನ್ನು ಪೆÇ್ರೀತ್ಸಾಹಿಸಬಹುದಾಗಿದೆ. ಈ ಎಲ್ಲಾ ಚಟುವಟಿಕೆಗಳು ಕೋವಿಡ್-19 ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಅನುಸರಿಸುವ ಷರತ್ತಿಗೆ ಒಳಪಟ್ಟಿರುತ್ತದೆ.

ರೆಸ್ಟೋರೆಂಟ್ ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ, ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕರ ಸಾರಿಗೆ ವಾಹನಗಳು, ಖಾಸಗಿ ವಾಹನಗಳ ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ಟಿಕೆಟ್‍ಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಕೋವಿಡ್-19 ಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.

ಮದುವೆ ಸಮಾರಂಭಗಳಲ್ಲಿ ಕೋವಿಡ್-19 ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 200 ಜನರಿಗೆ ಹಾಗೂ ಒಳಾಂಗಣ ಪ್ರದೇಶಗಳಲ್ಲಿ 100 ಜನರು ಮಾತ್ರ ಭಾಗವಹಿಸಲು ಸೀಮಿತಗೊಳಿಸಿ ಅನುಮತಿಸಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!