May 10, 2024

MALNAD TV

HEART OF COFFEE CITY

2,000 ರೂ ಮುಖಬೆಲೆಯ ನೋಟು ಹಿಂಪಡೆಯಲು ಏನು ಕಾರಣ..?

1 min read

 

1)ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್​ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ. ಹೀಗಾಗಿ, ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ.
2) 2,000 ರೂ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿ ಇಲ್ಲದಿರುವುದು

3) ಜನರ ಹಣ ವಹಿವಾಟಿನ ಅಗತ್ಯಕ್ಕೆ ಬೇರೆ ಕರೆನ್ಸಿಗಳು ಸಾಕಷ್ಟು ಇರುವುದು

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ.

 

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. ಆರ್​ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ. 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು. ಮೇ 23ರಿಂದ ನೋಟು ವಿನಿಮಯಕ್ಕೆ ಅವಕಾಶ ಕೊಡಲಾಗುತ್ತದೆ.2028ರ ಮಾರ್ಚ್ 31ರಲ್ಲಿ 2,000 ರೂ ಮುಖಬೆಲೆಯ ನೋಟುಗಳ ಒಟ್ಟು ಮೌಲ್ಯ 6.73 ಲಕ್ಷ ಕೋಟಿ ರೂ ಇತ್ತು. ಎಲ್ಲಾ ಕರೆನ್ಸಿ ನೋಟುಗಳ ಒಟ್ಟು ಮೊತ್ತದ ಶೇ. 37.3 ರಷ್ಟು ನೋಟುಗಳು 2,000 ರೂ ಮುಖಬೆಲೆಯದ್ದಾಗಿದ್ದವು. ಈ ಸಂಖ್ಯೆಯು 2023 ಮಾರ್ಚ್ 31ಕ್ಕೆ ಶೇ. 10.8ಕ್ಕೆ ಬಂದಿಳಿದಿದೆ.ಅಲ್ಲದೇ ಜನರೂ ಕೂಡ 2,000 ರೂ ನೋಟಿನ ಚಲಾವಣೆಯನ್ನೂ ತೀರಾ ಕಡಿಮೆ ಮಾಡಿದ್ದಾರೆ. 500 ರೂ ಮುಖಬೆಲೆಯ ನೋಟುಗಳಿಗೆ ಹೆಚ್ಚು ಬೇಡಿಕೆ ಇದೆ.

ಸಾರ್ವಜನಿಕರು ತಮ್ಮ ಬಳಿ 2,000 ರೂ ಮುಖಬೆಲೆಯ ನೋಟುಗಳಿದ್ದರೆ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಬಹುದು. ಯಾವುದೇ ಬ್ಯಾಂಕ್ ಬ್ರ್ಯಾಂಚ್​ಗೆ ಹೋಗಿ ಹಣ ಡೆಪಾಸಿಟ್ ಮಾಡಲು ಅವಕಾಶ ಇರುತ್ತದೆ. 2016ರ ನೋಟ್ ಬ್ಯಾನ್ ಸಂದರ್ಭದಲ್ಲಿ ಇದ್ದ ನಿಯಮಗಳನ್ನು ಈಗ ಮಾಡಲಾಗುತ್ತಿಲ್ಲ. 2,000 ರೂ ನೋಟುಗಳನ್ನು ಡೆಪಾಸಿಟ್ ಮಾಡಲು ಯಾವುದೇ ದಾಖಲೆ ಕೊಡಬೇಕಿಲ್ಲ. ಈ ನೋಟನ್ನು ಅಮಾನ್ಯ ಮಾಡಲಾಗಿಲ್ಲ. ಚಲಾವಣೆಯಿಂದ ಹಿಂಪಡೆಯಲಾಗಿದೆ ಅಷ್ಟೇ. ಈ ನೋಟುಗಳ ವಿನಿಮಯಕ್ಕೆ ಸರ್ಕಾರ ಕೊಟ್ಟಿರುವ ಕಾಲಾವಕಾಶ ಮುಗಿದ ಬಳಿಕ ಈ ನೋಟು ಅಸಿಂಧುಗೊಳ್ಳಬಹುದಾ ಎಂಬ ಮಾಹಿತಿ ತಿಳಿದಿಲ್ಲ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!