May 2, 2024

MALNAD TV

HEART OF COFFEE CITY

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆ ಸಾವು

1 min read

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ. ದೇವೀರಮ್ಮ (64) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಕಡೂರಿನ ಗ್ರಾಮೀಣ ಕೂಟ ಫೈನಾನ್ಸ್​ ನಿಂದ 78 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಅರ್ಥಿಕ ಸಂಕಷ್ಟದಿಂದ ಒಂದು ತಿಂಗಳಿನಿಂದ ಸಾಲದ ಕಂತನ್ನು ಮರುಪಾವತಿ ಮಾಡಿರಲಿಲ್ಲ. ಒಂದು ತಿಂಗಳಿನಿಂದ ಪ್ರತಿ ವಾರ ಫೈನಾನ್ಸ್​ಗೆ ಸಾಲ ಮರುಪಾವತಿ ಮಾಡದ ಹಿನ್ನೆಲೆ ದೇವೀರಮ್ಮ ಅವರ ಮನೆ ಬಳಿ ಬಂದು ಕಿರುಕುಳ ನೀಡಿದ ಆರೋಪ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಉಳಿದ ಬಾಕಿ ಮೊತ್ತ ಕಟ್ಟುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ ಅವರ ಕಚೇರಿಗೆ ಮಹಿಳೆ ಕರೆಸಿ ಇಡೀ ದಿನ ಫೈನಾನ್ಸ್ ಕಚೇರಿಯಲ್ಲಿ ಹಣ ಕಟ್ಟುವಂತೆ ಒತ್ತಡ ಹೇರಿದ್ದಾರೆ. ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!