May 15, 2024

MALNAD TV

HEART OF COFFEE CITY

ಮನಸ್ಸಿನ ನಿಯಂತ್ರಣ, ಉತ್ತಮ ಜೀವನಶೈಲಿ ರೂಪಿಸಲು ಯೋಗ ಸಹಕಾರಿ – ಭಾಗ್ಯಕ್ಕ,

1 min read
Yoga helps to control the mind, create a better lifestyle - Bhagyakka,

????????????????????????????????????

ಚಿಕ್ಕಮಗಳೂರು : ಮನಸ್ಸನ್ನು ಹಾಗೂ ಮೆದುಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹಾಗೂ ಇಂದಿನ ಒತ್ತಡದ ಬದುಕಿನಲ್ಲಿ ಜೀವನಶೈಲಿಯನ್ನು ಸರಿಯಾದ ರೀತಿಯಲ್ಲಿಟ್ಟುಕೊಳ್ಳಲು ಯೋಗ ಸಹಕಾರಿ ಎಂದು. ಬ್ರಹ್ಮಕುಮಾರಿಸ್ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಭಾಗ್ಯಕ್ಕ ತಿಳಿಸಿದರು.

yoga-helps-to-control-the-mind-create-a-better-lifestyle-bhagyakka

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್ಎಸ್ಎಸ್ ಘಟಕ, ಎನ್ಸಿಸಿ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನೂತನ ತಾಲ್ಲೂಕು ಕಛೇರಿಯಿಂದ ಎಂ.ಜಿ ರಸ್ತೆಯ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಳ್ಳಲಾದ ಯೋಗ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಬೇಕು. ಯೋಗವನ್ನು ಅಭ್ಯಾಸ ಮಾಡಿಕೊಳ್ಳುವುದರ ಮೂಲಕ ಎಲ್ಲರೂ ತಮ್ಮ ಜೀವನವನ್ನು, ವ್ಯಕ್ತಿತ್ವವನ್ನು ಸುಧಾರಿಸಿಕೊಳ್ಳಲು ಸಂಕಲ್ಪ ಮಾಡಬೇಕು ಎಂದು ಅವರು ತಿಳಿಸಿದರು.
ವಿಶ್ವಸಂಸ್ಥೆ ೨೦೧೫ರಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾರಿಗೆ ತಂದಿತು. ಆ ರ‍್ಷದಿಂದ ಪ್ರತೀ ರ‍್ಷ ಜೂನ್ ೨೧ರಂದು ಯೋಗದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಜೂನ್ ೨೧ರ ಯೋಗದಿನಾಚರಣೆಯ ಪರ‍್ವಭಾವಿಯಾಗಿ ಯೋಗದ ಬಗ್ಗೆ ಅರಿವು ಮೂಡಿಸಲು ಯೋಗ ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಯೋಗ ಸಮಿತಿಯ ಅಧ್ಯಕ್ಷ ಎಚ್.ಸಿ.ಸುರೇಂದ್ರ ಮಾತನಾಡಿ, ಪ್ರಥಮವಾಗಿ ಯೋಗ ದಿನಾಚರಣೆಯನ್ನು ಹಮ್ಮಿಕೊಂಡಾಗ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತುಎಂದುತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ಎಸ್, ಭಾರತ್ ಸ್ವಾಭಿಮಾನ್ ಟ್ರಸ್ಟ್ನ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಪವಿತ್ರ, ಪತಾಂಜಲಿ ಯೋಗಶಿಕ್ಷಣ ಸಮಿತಿಯ ಶ್ರೀನಿವಾಸ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಸೀಮಾ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!