May 3, 2024

MALNAD TV

HEART OF COFFEE CITY

ಚಿತ್ರೀಕರಣದ ವೇಳೆ ನಟಿ ಶುಭಾ ಪೂಂಜಾರೊಂದಿಗೆ ಯುವಕರ ಅಸಭ್ಯ ವರ್ತನೆ

1 min read

ಚಿಕ್ಕಮಗಳೂರು: ಕೊರಗಜ್ಜದ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ಕಿಡಿಗೇಡಿಗಳು ನಟಿ ಶುಭಾ ಪೂಂಜಾರೊಂದಿಗೆ ಅಸಭ್ಯ ವರ್ತನೆ ಮಾಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕು ಕುದುರೆಮುಖದಲ್ಲಿ ನಡೆದಿದೆ.

ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಆ ಹಾಡಿನ ಚಿತ್ರೀಕರಣದ ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ನಟಿ ಶುಭಾ ಪೂಂಜಾ ಡ್ಯಾನ್ಸ್ ಮಾಡುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪು ಕೈ ಹಿಡಿದು ಎಳೆದು ಅಸಭ್ಯ ವರ್ತನೆ ಮಾಡಿದ್ದಾರೆ. ಯುವಕರ ಅಸಭ್ಯ ವರ್ತನೆಯಿಂದ ಬೇಸರಗೊಂಡ ಚಿತ್ರತಂಡ ಹಾಡಿನ ಚಿತ್ರೀಕರಣ ನಿಲ್ಲಿಸಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಕೊರಗಜ್ಜ ಚಿತ್ರ ಮೂಡಿಬರುತ್ತಿದೆ. ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಜೊತೆ ಶುಭಾ ಶೂಟಿಂಗ್ ನಡೆಸುವ ವೇಳೆ ಈ ಘಟನೆ ನಡೆದಿದೆ. ಆದರೆ ಈ ಸಂಬಂಧ ಚಿತ್ರತಂಡ ಈವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನಿರ್ದೇಶಕ ಸುಧೀರ್ ಅತ್ತಾವರ ಅವರು ಸಿನಿಮಾ ಚಿತ್ರೀಕರಣದ ವೇಳೆ ಶುಭಾ ಪೂಂಜ ಅವರಿಗೆ ಕೆಲ ಯುವಕರು ಕಿರಿಕ್ ಮಾಡಿದ್ದು, ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ. ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು. ಬಿಜೆಪಿ ಪಕ್ಷದ ಸಾಗರ ಘಟಕವೆಂದು ಹೇಳಿಕೊಂಡು ಕೆಲ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!